ಇಂದು ಬೆಳಗ್ಗೆ 10 ಗಂಟೆಗೆ ಬಂಟ್ವಾಳ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಾಳ್ತಿಲ ನೀರಪಾದೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು *250 ಹೂವಿನ ಹಾಗೂ ಹಣ್ಣು ಹಂಪಲು ಗಿಡಗಳನ್ನು* ನೆಡುವ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಹಾಗೂ ರವೀಶ್ ಶೆಟ್ಟಿ, ಉಪಾಧ್ಯಕ್ಷರಾದ ಚಿದಾನಂದ ರೈ, ಕಾರ್ಯದರ್ಶಿ ಗಣೇಶ್ ರೈ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಲಕಿತಾ ಶೆಟ್ಟಿ ಹಾಗೂ ಸೀಮಾ ಮಾಧವ ಹಾಗೂ ಉಪಾಧ್ಯಕ್ಷರುಗಳಾದ ಲಕ್ಷ್ಮೀ ಪ್ರಭು ಹಾಗೂ ಹಿರಣ್ಮಯಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಕಮಲಾಕ್ಷಿ ಪೂಜಾರಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಗೀತಾ ಚಂದ್ರಶೇಖರ್ ಮಂಡಲದ ಪದಾಧಿಕಾರಿಗಳು, ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಭಾಗವಹಿಸಿದ್ದರು.