ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೆಲವೇ ಹೊತ್ತಿನಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ತಮ್ಮ ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನಲೆಯಲ್ಲಿ ವಿಧಾನಸೌಧದಲ್ಲಿ ಭಾಷಣ ಮಾಡಿದ ವೇಳೆ ಅವರು ತಮ್ಮ ರಾಜೀನಾಮೆ ನಿರ್ಧಾರವನ್ನು ಘೋಷಿಸಿದ್ದಾರೆ.
ಅದರಲ್ಲಿಯೂ ತಮ್ಮನ್ನು ಏಳು ಬಾರಿ ಶಾಸಕನಾಗಿ ಆಯ್ಕೆ ಮಾಡಿದ ಶಿಕಾರಿಪುರದ ಜನತೆಯನ್ನು ವಿಶೇಷವಾಗಿ ಯಡಿಯೂರಪ್ಪ ಸ್ಮರಿಸಿಕೊಂಡಿದ್ದಾರೆ.
ಇದರ ಮಧ್ಯೆ ಮತ್ತೊಂದು ಸಂಗತಿಯೆಂದರೆ ವಿಧಾನಸೌಧದಿಂದ ಕಾಲ್ನಡಿಗೆಯಲ್ಲೇ ರಾಜಭವನಕ್ಕೆ ತೆರಳಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.