Sunday, April 7, 2024

ಪೈಪ್ ಲೈನ್ ಕೊರೆದು ಡೀಸೆಲ್‌ ಕಳವು ಆರೋಪಿ ಮನೆ ಬಿಟ್ಟು ಪರಾರಿ

ಬಂಟ್ವಾಳ: ಪೈಪ್ ಲೈನ್ ಕೊರೆದು ಡೀಸೆಲ್‌ ಕಳವು ಮಾಡುವ ಪ್ರಕರಣ ಸೋರ್ನಾಡು ಎಂಬಲ್ಲಿ ಪತ್ತೆಯಾಗಿದೆ.

ಬಂಟ್ವಾಳ ತಾಲೂಕಿನ ಸೋರ್ನಾಡು ಅರ್ಬಿ ಎಂಬಲ್ಲಿ ಎಂ.ಆರ್.ಪಿ.ಎಲ್.ಕಂಪೆನಿಗೆ ಸೇರಿದ ಪೈಪ್ ಲೈನ್ ಕೊರೆದು ಡೀಸಲ್ ಕಳ್ಳತನ ಮಾಡುತ್ತಿದ್ದ ಘಟನೆ ಬಗ್ಗೆ ಬೆಳಕಿಗೆ ಬಂದಿದ್ದು, ಬಂಟ್ವಾಳ ಗ್ರಾಮಾಂತರ ಪೋಲೀಸರಿಂದ ತನಿಖೆ ಆರಂಭವಾಗಿದೆ.

ಈ ಬಗ್ಗೆ ಸುಲಿವು ಸಿಕ್ಕಿದ ಕೂಡಲೇ ಆರೋಪಿ ಐವನ್ ಮನೆ ಬಿಟ್ಟು ಪರಾರಿಯಾಗಿದ್ದು ಪೋಲೀಸರು ಆತನಿಗಾಗಿ ಹುಡುಕಲು ಆರಂಭಿಸಿದ್ದಾರೆ.

ಅರಳ ಗ್ರಾಮದ ಸೋರ್ನಾಡು ಸಮೀಪದ ಅರ್ಬಿ ಎಂಬಲ್ಲಿ ಐವನ್ ಎಂಬವರಿಗೆ ಸೇರಿದ ಖಾಸಗಿ ಜಮೀನಿನ ರಸ್ತೆಯಲ್ಲಿ ಹಾದು ಹೋಗಿರುವ ಪೈಪ್ ಲೈನ್ ನ್ನು ಕೊರೆದು ಡೀಸೆಲ್ ಕಳವು ಮಾಡುತ್ತಿದ್ದರು.

ಮಂಗಳೂರು ಎಂ‌ಆರ್.ಪಿ.ಎಲ್.ಕಂಪೆನಿಯಿಂದ ಹಾಸನಕ್ಕೆ ಪೈಪ್ ಲೈನ್ ಮುಖಾಂತರ ಸಾಗಾಟ ವಾಗುವ ಡಿಸೇಲ್ ನ್ನು ಕಳವು ಮಾಡಲಾಗಿದೆ.

ಐವನ್ ಅವರ ರಸ್ತೆಯಲ್ಲಿ ಸುಮಾರು 20 ಅಡಿ ಆಳದಲ್ಲಿ ಹಾದುಹೋಗುವ ಡೀಸೆಲ್‌ ಪೈಪ್ ಲೈನ್ ನ್ನು ಅಗೆದು ಬಳಿಕ ಪೈಪ್ ಲೈನ್ ಕೊರೆದು ಅ ಪೈಪ್ ಗೆ ಇನ್ನೊಂದು ಪೈಪ್ ಅಳವಡಿಸಿ ಸುಮಾರು ಅರ್ಧ ಕಿ.ಮೀ ದೂರದಲ್ಲಿ ಗೇಟ್ ವಾಲ್ ಸಿಕ್ಕಿಸಿ ಟ್ಯಾಪ್ ಮೂಲಕ ವಾಹನಕ್ಕೆ ಡೀಸೆಲ್‌ ತುಂಬಿಸಿ ಅ ಬಳಿ ಮಾರಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿ ಯನ್ನು ಪೋಲೀಸರು ನೀಡಿದ್ದಾರೆ.

ಕಂಪೆನಿಯಲ್ಲಿ ಕೆಲ ದಿನಗಳಿಂದ ಪೈಪ್ ಲೈನ್ ನಲ್ಲಿ ಡಿಸೇಲ್ ನ ಅಳತೆಯಲ್ಲಿ ವ್ಯತ್ಯಾಸ ಕಂಡು ಬರುತ್ತಿದ್ದು ಸ್ವತಃ ಕಂಪೆನಿಯವರು ಮಂಗಳೂರು ಕಮೀಷನರ್ ಅವರಿಗೆ ದೂರು ನೀಡಿದ್ದಾರೆ.

ಕಂಪೆನಿ ಈ ಬಗ್ಗೆ ಕಂಪೆನಿಯ ತಂತ್ರಜ್ಞಾನ ಯಂತ್ರ ದಲ್ಲಿ ಪರಿಶೀಲನೆ ನಡೆಸಿದಾಗ ಇಲ್ಲಿ ಸೋರಿಕೆ ಕಂಡು ಬಂದಿದೆ.

ಈ ಹಿನ್ನೆಲೆಯಲ್ಲಿ ಕಂಪೆನಿಯವರು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿ ಪೋಲೀಸರ ಸಮಕ್ಷಮದಲ್ಲಿ ಐವನ್ ಅವರ ರಸ್ತೆಯನ್ನು ಜೆ.ಸಿ‌ಬಿ.ಮೂಲಕ ಅಗೆಯುವ ಕಾರ್ಯ ಮಾಡಿದ್ದಾರೆ.

ರಸ್ತೆಯನ್ನು ಅಗೆದಾಗ ಕಂಪೆನಿ ಪೈಪ್ ಲೈನ್ ಕೊರೆದು ಇವರು ಡೀಸೆಲ್‌ ಕಳವು ಮಾಡುತ್ತಿದ್ದ ಬಗ್ಗೆ ಬೆಳಕಿಗೆ ಬಂದಿದೆ.

ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಸ್ಥಳದಲ್ಲಿದ್ದು ಪ್ರಕರಣದ ಬಗ್ಗೆ ತನಿಖೆ ಆರಂಭಿಸಿ ದ್ಧಾರೆ.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...