ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ಕಂದಾಯ ಇಲಾಖಾ ಸವಲತ್ತುಗಳ ಮಾಹಿತಿ ಶಿಬಿರ ಬುಧವಾರ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿ ಸಲ್ದಾನ ಉದ್ಘಾಟಿಸಿದರು. ಇರ್ವತ್ತೂರು ಗ್ರಾಮ ಪಂಚಾಯತು ಅಧ್ಯಕ್ಷ ಎಂ.ಪಿ.ಶೇಖರ್ ಅಧ್ಯಕ್ಷತೆ ವಹಿಸಿದ್ದರು. ಪಿಲಾತಬೆಟ್ಟು ಗ್ರಾಮ ಪಂಚಾಯತು ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಚೆನ್ನೈತ್ತೋಡಿ ಗ್ರಾಮ ಪಂಚಾಯತು ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಪತ್ರಕರ್ತ ಗೋಪಾಲ ಅಂಚನ್, ಪಂಚಾಯತು ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್., ಶಾಲಾ ಮುಖ್ಯ ಶಿಕ್ಷಕ ಸುನಿಲ್ ಸಿಕ್ವೇರಾ, ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಸೇವಾ, ಸಮಿತಿ ಸದಸ್ಯರಾದ ಸಂತೋಷ ದೋಟ,ಲೋಕೇಶ್ ಎರ್ಮೆನಾಡು, ಉಮೇಶ್ ಆಚಾರ್ಯ,ಶಶಿಧರ್ ನಾಯ್ಕ ಮಣ್ಣೂರು ಮೊದಲಾದವರಿದ್ದರು. ನಿವೃತ್ತ ಶಿಕ್ಷಕ ನಾರಾಯಣ ನಾಯ್ಕ್ ಕರ್ಪೆ ಕಂದಾಯ ಇಲಾಖಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಇರ್ವತ್ತೂರು ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ವರ್ಗಾವಣೆ ಹಿನ್ನೆಲೆಯಲ್ಲಿ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಉಮೇಶ್ ಆಚಾರ್ಯ ಕುಮಂಗಿಲ ಪ್ರಾರ್ಥಿಸಿದರು. ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಂಕರ್ ಶೆಟ್ಟಿ ಬೆದ್ರಮಾರ್ ಸ್ವಾಗತಿಸಿದರು.
ಸಮಿತಿಯ ಕಾರ್ಯದರ್ಶಿ ದಯಾನಂದ ಎರ್ಮೆನಾಡು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.