ದಕ್ಷಿಣ ಕನ್ನಡ : ಅಪ್ರಾಪ್ತ ಮಕ್ಕಳನ್ನು ಜೀತಕ್ಕೆ ಇಟ್ಟುಕೊಂಡು, ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದಂತ ಪ್ರಕರಣ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ ಬಳಿಯಲ್ಲಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇನ್ನೂ ಜೀತಪದ್ಧತಿ ಜೀವತಂವಾಗಿರೋದು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ ಬಳಿಯಿರುವಂತ ವಿಶ್ವನಾಥ್ ಭಟ್ಟ ಎನ್ನುವವರ ಮನೆಯಲ್ಲಿ ಅಪ್ರಾಪ್ತ ಮಕ್ಕಳು ಸೇರಿದಂತೆ ಹಲವರನ್ನು ಜೀತಕ್ಕೆ ಇಟ್ಟುಕೊಂಡು ದುಡಿಸಿಕೊಳ್ಳಲಾಗುತ್ತಿದೆ ಎಂಬುದಾಗಿ, ಮಕ್ಕಳ ರಕ್ಷಣಾ ಸಮಿತಿಗೆ ಸ್ಥಳೀಯರು ದೂರು ನೀಡಿದ್ದರು. ಈ ದೂರು ಆಧರಿಸಿ, ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕಿ ಪಲ್ಲವಿ ಅಕುರಾತಿ ಅವರು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.
ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶಕಿಯ ಸೂಚನೆಯಂತೆ, ಸುಳ್ಯ ತಾಲೂಕಿನ ಪಂಜ ಗ್ರಾಮದ ಕರಿಕಳ ವಿಶ್ವನಾಥ್ ಭಟ್ಟ ಅವರ ಮನೆಯ ಮೇಲೆ ಮಕ್ಕಳ ಹಕ್ಕುಗಳ ರಕ್ಷಣಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ವಿವಿಧೆಡೆಗಳಿಂದ ಜೀತಕ್ಕೆ ಇಡಿಸಿಕೊಳ್ಳಲಾಗಿದ್ದಂತ 10 ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಅಂದಹಾಗೇ ರಾಜ್ಯದ ವಿವಿಧ ಭಾಗಗಳಿಂದ ವಿಶ್ವನಾಥ್ ಭಟ್ ದಂಪತಿ ಅಪ್ರಾಪ್ತ ವಯಸ್ಸಿನ ಮಕ್ಕಳು, ವಯಸ್ಕರನ್ನು ಕರೆದುಕೊಂಡು ಬಂದು, ಕೆಲಸಕ್ಕೆ ಇಟ್ಟುಕೊಳ್ಳುತ್ತಿದ್ದರು. ಇಂತಹ ಮಕ್ಕಳು, ವಯಸ್ಕರಿಗೆ ಸಂಬಂಳ ನೀಡುತ್ತಿದ್ದರು ಎಂಬುದಾಗಿ ತಿಳಿದು ಬಂದಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.