Saturday, April 20, 2024

ಕಾರ್ಮಿಕರಿಗೆ ಅನೇಕ ಸೌಲಭ್ಯಗಳಿದ್ದು, ನೊಂದಣಿ ಮಾಡಿ: ಶಾಸಕ ಯು.ಟಿ.ಖಾದರ್

ಬಂಟ್ವಾಳ: ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡು ಕಾರ್ಡ್ ಪಡೆದರೆ ಮಕ್ಕಳ ಶಿಕ್ಷಣ, ಆರೋಗ್ಯ ಸೇರಿದಂತೆ ಇಲಾಖೆಯಿಂದ ಸಾಕಷ್ಟು ಸೌಲಭ್ಯಗಳಿದ್ದು, ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಲ್ಲಿ ನೋಂದಣಿ ಕಾರ್ಯ ನಡೆಸಲಾಗುವುದು ಎಂದು ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ಹೇಳಿದರು.

ಅವರು ಶನಿವಾರ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ಆಹಾರದ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.

ಮಾಹಿತಿ ಕೊರತೆಯಿಂದ ಕಾರ್ಮಿಕರು ಸೌಲಭ್ಯದಿಂದ ವಂಚಿತರಾಗುತ್ತಿದ್ದು, ಈ ನಿಟ್ಟಿನಲ್ಲಿ ಅಧಿಕಾರಿ, ಜನಪ್ರತಿನಿಧಿಗಳು ಮಾಹಿತಿ ನೀಡುವ ಕಾರ್ಯ ಮಾಡಬೇಕು. ವಲಸೆ ಕಾರ್ಮಿಕರಿಗೂ ಮುಂದಿನ ದಿನಗಳಲ್ಲಿ ನೆರವು ನೀಡುವ ನಿಟ್ಟಿನಲ್ಲಿ ಇಲಾಖೆ ಕಮೀಷನರ್ ಜತೆ ಮಾತುಕತೆ ನಡೆಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಗೆ ಗುತ್ತಿಗೆದಾರರು ಶುಲ್ಕ ಪಾವತಿಸಿದ್ದು, ಅದರಿಂದ ಪ್ರಸ್ತುತ ನೆರವು ನೀಡಲಾಗುತ್ತಿದೆ ಎಂದರು.

ಜಿ.ಪಂ.ಮಾಜಿ ಸದಸ್ಯರಾದ ಉಮ್ಮರ್ ಫಾರೂಕ್ ಫರಂಗಿಪೇಟೆ, ಚಂದ್ರಪ್ರಕಾಶ್ ಶೆಟ್ಟಿ ತುಂಬೆ,‌ ಪುದು ಗ್ರಾ.ಪಂ.ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಉಪಾಧ್ಯಕ್ಷೆ ಲಿಡಿಯಾ ಪಿಂಟೋ, ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ, ಮೇರಮಜಲು ಗ್ರಾ.ಪಂ.ಸದಸ್ಯೆ ವೃಂದಾ ಮೊದಲಾದವರು ಉಪಸ್ಥಿತರಿದ್ದರು.

ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ ಸ್ವಾಗತಿಸಿದರು.

More from the blog

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...