ದ.ಕ ಜಿಲ್ಲಾ ಪಂಚಾಯತ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸಮುದಾಯ ಸಂಸ್ಥೆ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ, ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯ ಸಲುವಾಗಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಬೀದಿ ನಾಟಕ ಮಾಣಿ ಗ್ರಾಮ ಪಂಚಾಯತ್ ವಠಾರದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರು, ಭೂಮಿಯ ಮೇಲಿನ ನೀರನ್ನು ಸಂರಕ್ಷಿಸುವುದು ಮತ್ತು ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದು ದೇಶದ ಪ್ರಜೆಗಳಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಬೀದಿನಾಟಕದಲ್ಲಿ ಸಿಕ್ಕ ಅತ್ಯಮೂಲ್ಯ ಮಾಹಿತಿಗಳನ್ನು ಮನೆಮನೆಗೆ ತಲುಪಿಸಿ, ಆ ಮೂಲಕ ಸ್ವಸ್ಥ ಸಮಾಜದ ನಿರ್ಮಾಣದಲ್ಲಿ ನಾವೆಲ್ಲರೂ ತೊಡಗಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಮಿತ್ರಾಕ್ಷಿ, ಗ್ರಾಮ ಕರಣಿಕೆ ಸುರಕ್ಷಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ವಂದಿಸಿದರು.