ಡಾ.ಮನಮೋಹನ್ ಸಿಂಗ್ ರವರು ಪ್ರಧಾನಮಂತ್ರಿಯಾಗಿದ್ದಾಗ ಜಾರಿಗೆ ತಂದ ವಿಶ್ವದಲ್ಲಿಯೇ ಗುರುತಿಸಲ್ಲಟ್ಟ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಿಂದಾಗಿ ಪ್ರಸ್ತುತ ದಿನಗಳಲ್ಲಿ ಇಡೀ ದೇಶದಲ್ಲಿ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಸಿಗುವಂತಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಮಹಿಳಾ ಕಾಯಕೋತ್ಸವ ಮತ್ತು ಉದ್ಯೋಗ ಖಾತರಿ ಯೋಜನೆಯ ಮಹಿಳಾ ಸದಸ್ಯರಿಗಾಗಿ ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಂಡ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಐದಾರು ತಿಂಗಳಿನಿಂದ ಉದ್ಯೋಗ ಖಾತರಿ ಯೋಜನೆಯ ಮೂಲಕ ಹಲವಾರು ಕಾರ್ಯಗಳನ್ನು ಮಾಡಲಾಗಿದ್ದು ತಾಲೂಕಿನಲ್ಲಿಯೇ ಗುರುತಿಸುವಂತಾಗಿದೆ. ಮುಂದಿನ ದಿನಗಳಲ್ಲಿ ಮಹಿಳೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಈ ಯೋಜನೆಯಲ್ಲಿ ತೊಡಗಿಕೊಳ್ಳುವ ಉದ್ದೇಶದಿಂದ ಈ ತರಬೇತಿಯನ್ನು ಆಯೋಜಿಸಲಾಗಿದೆ. ಎಲ್ಲರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ತರಬೇತುದಾರರಾಗಿ ಆಗಮಿಸಿದ ಉದ್ಯೋಗ ಖಾತರಿ ಯೋಜನೆಯ ತಾಲೂಕು ಸಂಯೋಜಕ ರಾಜೇಶ್ ರವರು ಯೋಜನೆಯ ನಿಯಮ ನಿಬಂಧನೆಗಳು ಮತ್ತು ಯೋಜನೆಯಿಂದ ಸಿಗುವ ಪ್ರಯೋಜನಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ ತೋಟ, ಸೀತಾ, ಸುಜಾತಾ, ಮಿತ್ರಾಕ್ಷಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂಸ್ಥೆಯ ಮೇಲ್ವಿಚಾರಕಿಯರಾದ ಲೈಲಾಬಿ ಮತ್ತು ರವಿಕಲಾ ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಸಿಬ್ಬಂದಿಯವರು ಸಹಕರಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here