Wednesday, April 10, 2024

ಕಾರ್ತಿಕ್ ಸಾವು ಅನುಮಾನಸ್ಪದ : ಸೂಕ್ತ ತನಿಖೆಗೆ ಹಿಂದೂ ಜಾಗರಣ ವೇದಿಕೆ ಒತ್ತಾಯ

ಬಂಟ್ವಾಳ: ರೈಲಿನ ಹಳಿಯ ಮೇಲೆ ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬೆಟ್ಟು ನಿವಾಸಿ ಲಕ್ಷ್ಮಣ ಪೂಜಾರಿ ಅವರ ಮಗ ಕಾರ್ತಿಕ್ ಪೂಜಾರಿ ಯವರ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಬಂಟ್ವಾಳ ಉಪವಿಭಾಗ ಡಿ.ವೈ.ಎಸ್.ಪಿ.ಯವರಿಗೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ವತಿಯಿಂದ ಮನವಿ ಸಲ್ಲಿಸಿದ್ದಾರೆ.

ಜುಲೈ 26ರಂದು ಕಾರ್ತಿಕ್ ಪೂಜಾರಿಯವರ ಮೇಲೆ ದೆಮುಂಡೆ ಎಂಬಲ್ಲಿ ಶರೀಫ್ ಟಿ ಕೆ , ಸೊಹೇಲ್ , ನಾಸಿರ್, ಎಂಬವರಿಂದ ಹಲ್ಲೆ ನಡೆದಿತ್ತು, ಈ ಮೂರು ಜನರ ಹೆಸರಿನ ಮೇಲೆ ಕಾರ್ತಿಕ್ ಪೂಜಾರಿಯವರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರಿನಲ್ಲಿ ತಿಳಿಸಲಾಗಿತ್ತು.
ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಸೊಹೇಲ್ ಎಂಬವನು ಹಲ್ಲೆ ನಡೆಸಿದ್ದು ಆದರೆ ಎಫ್ ಐ ಆರ್ ನಲ್ಲಿ ಸೊಹೇಲ್ ಹೆಸರು ಕೈ ಬಿಡಲಾಗಿದೆ, ಇದರ ಬೆನ್ನಿಗೆ ಕಾರ್ತಿಕ್ ಪೂಜಾರಿಯವರ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಅನುಮಾನಕ್ಕೆ ಕಾರಣವಾಗಿದೆ ಆದ್ದರಿಂದ ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹಿಂದು ಜಾಗರಣ ವೇದಿಕೆ ವತಿಯಿಂದ ಮನವಿಯಲ್ಲಿ ಒತ್ತಾಯಿಸಿದೆ.
ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆ ಜಿಲ್ಲಾ ನ್ಯಾಯ ಜಾಗರಣ ಪ್ರಮುಕ್ ರಾಜೇಶ್ ಬೊಳ್ಳುಕಲ್ಲು, ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕ್ ಅಧ್ಯಕ್ಷರು ತಿರುಲೇಶ್ ಬೆಳ್ಳೋರು, ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಕಾರ್ಯದರ್ಶಿ ಹರೀಶ್ ತಲೆಂಬಿಲ, ಹಿಂದು ಜಾಗರಣ ವೇದಿಕೆ ಬಂಟ್ವಾಳ ಹಿಂದು ಯುವ ವಾಹಿನಿ ಸಂಯೋಜಕ್ ತಿಲಕ್ ಅಮ್ಮ್ಮಡಿ ಉಪಸ್ಥಿತರಿದ್ದರು.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...