Saturday, April 6, 2024

ಆಡಿಯೋ ಮೂಲಕ ಕಳಂಕ ತರುವ ಕೆಲಸ; ತನಿಖೆಗೆ ನಳಿನ್‍ಕುಮಾರ್ ಕಟೀಲ್ ಮನವಿ

ಆಡಿಯೋ ಮೂಲಕ ಕಳಂಕ ತರುವ ಕೆಲಸ; ತನಿಖೆಗೆ ನಳಿನ್‍ಕುಮಾರ್ ಕಟೀಲ್ ಮನವಿ

ಬೆಂಗಳೂರು: “ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸ್ ಆ್ಯಪ್‍ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ಶ್ರೀ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ ಎಂದು ಮಾಧ್ಯಮ ಸಂಚಾಲಕ  ಕರುಣಾಕರ ಖಾಸಲೆ ಪ್ರಕಟನೆಯ ಲ್ಲಿ ತಿಳಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...