Friday, April 5, 2024

“ಸೋಶಿಯಲ್ ಇಖ್ವಾ ಫೆಡರೇಶನ್”ನಿಂದ ಮಾನವೀಯ ಕಾರ್ಯ

ಬಂಟ್ವಾಳ : ಮಾನವೀಯತೆಯೇ ಮರೆಯಾಗುವ ಈ ಕಾಲಘಟ್ಟದಲ್ಲಿ ಮಾನವೀಯತೆಯನ್ನು ಸಾರುವ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಸೋಶಿಯಲ್ ಇಖ್ವಾ ಫೆಡರೇಶನ್ ನ ಕಾರ್ಯ ಶ್ಲಾಘನೀಯ ಎಂದು ಮಾಣಿ ಗ್ರಾಮಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.

ಅವರು ಸೋಶಿಯಲ್ ಇಖ್ವಾ ಫೆಡರೇಶನ್ ಮಾಣಿ ಇದರ ಆಶ್ರಯದಲ್ಲಿ ಜು.8 ರಂದು ನೇರಳಕಟ್ಟೆ ಇಂಡಿಯನ್ ಅಡಿಟೋರಿಯಂ ನಲ್ಲಿ ನಡೆದ ರಕ್ತದಾನ ಶಿಬಿರ ಮತ್ತು ಮಹೂಂ ಹಾಜಿ ಬಿ.ಹುಸೈನ್ ಸ್ಮರಣಾರ್ಥ ಆಂಬುಲೆನ್ಸ್ ಸೇವಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸುಲ್ತಾನ್ ಹಾಜಿ ಬಿ.ಹುಸೈನ್ ಸ್ಮರಣಾರ್ಥ ಅವರ ಮಕ್ಕಳು ಸಮಾಜಕ್ಕೆ ಅಂಬ್ಯುಲೆನ್ಸ್ ಕೊಡುಗೆ ನೀಡಿರುವುದು ಅವರ ಸಾಮಾಜಿಕ ಕಾರ್ಯಗಳಿಗೆ ನೀಡಿದ ದೊಡ್ಡ ಗೌರವ ಎಂದ ಅವರು, ಇಖ್ವಾ ಫೆಡರೇಶನ್ ನ ಸಾಮಾಜಿಕ ಸೇವೆ ಇನ್ನಷ್ಟು ಮುಂದುವರಿಯಲಿ ಎಂದರು.

ಸೋಶಿಯಲ್ ಇಖ್ವಾ ಫೆಡರೇಶನ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಸುಲ್ತಾನ್ ಅಧ್ಯಕ್ಷತೆ ವಹಿಸಿದ್ದರು.

ಮಾಣಿ ಶ್ರೀಪದ್ಮ ಕ್ಲಿನಿಕ್ ನ ಡಾ| ಶ್ರೀನಾಥ್ ಆಳ್ವ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶುಭಹಾರೈಸಿದರು. ಸುಲ್ತಾನ್ ಬೀಡಿ ಮಾಲಕರಾದ ಹಾಜಿ ಉಮ್ಮರ್ ಫಾರೂಕ್ ನೂತನ ಅಂಬ್ಯುಲೆನ್ಸ್ ಅನ್ನು ಲೋಕಾರ್ಪಣೆಗೊಳಿಸಿದರು. ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚ್ ಮಾಜಿ ಉಪಾಧ್ಯಕ್ಷ ರೋಷನ್ ಬೊನಿಫಾಸ್ ಮಾರ್ಟಿಸ್ ಮಾತನಾಡಿ, ಸೋಶಿಯಲ್ ಇಖ್ವಾ ಫೆಡರೇಶನ್ ಬಹಳ ಉತ್ಸುಕತೆಯಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿದ್ದು, ದಾನಿಗಳ ನೆರವಿನಲ್ಲಿ ಅಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿರುವುದು ಸಂಘಟನೆಯ ಸಾಮಾಜಿಕ‌ ಕಳಕಳಿಗೆ ಸಾಕ್ಷಿ ಎಂದರು. ಮುಸ್ಲಿಂ ಸೆಂಟ್ರಲ್ ಕಮಿಟಿ ಸದಸ್ಯ ಹನೀಫ್ ಖಾನ್ ಕೊಡಾಜೆ ಮಾತನಾಡಿ, ಇಹಲೋಕದ ಜೀವನದಲ್ಲಿ ನಾವು ಮಾಡಿದ‌ ಸತ್ಕರ್ಮಗಳು ಮಾತ್ರ ನಮ್ಮನ್ನು ಪರಲೋಕದಲ್ಲೂ‌ ಸುಖದಿಂದ‌ ಇರಲು ಪ್ರೇರಣೆಯಾಗುತ್ತದೆ, ಇಖ್ವಾ ಫೆಡರೇಶನ್ ನ ಕಾರ್ಯ ಇಂತಹಾ ಕಾರ್ಯಕ್ಕೆ ಪ್ರೇರಣೆಯಾಗುತ್ತಿದೆ ಎಂದರು.

ನೆಟ್ಲ ಮುಡ್ನೂರು ಗ್ರಾ.ಪಂ.ಅಧ್ಯಕ್ಷ ಸತೀಶ್ ಪೂಜಾರಿ ಕೊಪ್ಪರಿಗೆ, ವಿಟ್ಲ ಜಿಲ್ಲಾ ಪಿಎಫ್ ಐ ಅಧ್ಯಕ್ಷ ಝಕಾರಿಯಾ ಗೋಳ್ತಮಜಲು,

ಬರಿಮಾರು ಶ್ರೀ ಮಹಮ್ಮಾಯಿ ದೇವಸ್ಥಾನದ ಆಡಳಿತ‌ ಮೊಕ್ತೇಸರರಾದ ರಾಕೇಶ್ ಪ್ರಭು, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ , ಕೆ.ಎಂ.ಸಿ.ವೈದ್ಯಾಧಿಕಾರಿ ಡಾ.ಹರ್ಷ ಶುಭಹಾರೈಸಿದರು.

ಮಿಲ್ಲತ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಉ‌ಮ್ಮರ್, ಉದ್ಯಮಿ ಹಾಜಿ ರಫೀಕ್ ಸುಲ್ತಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್ಐಫ್ ನ ಮಾಧ್ಯಮ ಕಾರ್ಯದರ್ಶಿ ಪಿ.ಜೆ.ಅಬ್ದುಲ್ ಅಝೀಝ್ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ರಶೀದ್ ಕೋರ್ಯ ಸ್ವಾಗತಿಸಿದರು. ಎಸ್ಐಎಫ್ ಉಪಾಧ್ಯಕ್ಷ ರಿಯಾಜ್ ಕಲ್ಲಾಜೆ ವಂದಿಸಿದರು.ಪಿ.ಜೆ.ಅಬ್ದುಲ್ ಅಝೀಝ್ ಕಾರ್ಯಕ್ರಮ ನಿರ್ವಹಿಸಿದರು. ರಕ್ತದಾನ ಶಿಬಿರದಲ್ಲಿ 60 ಯುನಿಟ್ ರಕ್ತ ಸಂಗ್ರಹಿಸಲಾಯಿತು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...