ಬಂಟ್ವಾಳ: ದ.ಕ.ಜಿಲ್ಲೆಯಾದ್ಯಂತ ಧಾರಾಕಾರವಾಗಿ ಸುರಿಯುವ ಮಳೆಯ ಕಾರಣ ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗಿದೆ.
ಸಂಜೆ ವೇಳೆ ನೇತ್ರಾವತಿ ನೀರಿನ ಮಟ್ಟ 7 ಮೀಟರ್ ಆಗಿದೆ.ಅಪಾಯದ ಮಟ್ಟ 8.5 ಆಗಿದ್ದು ಮಳೆಯ ಪ್ರಮಾಣ ಹೆಚ್ಚಾಗಿ ಇರುವುದರಿಂದ ಮತ್ತೆ ರಾತ್ರಿ ವೇಳೆ ನೇತ್ರಾವತಿ ನೀರಿನ ಮಟ್ಟ ತುಸು ಹೆಚ್ಚಾಗುವ ಸಾಧ್ಯ ತೆಗಳಿವೆ.
ಇದೇ ರೀತಿ ಮಳೆ ಮುಂದುವರಿದರೆ ಬಂಟ್ವಾಳ ತಾಲೂಕಿನ ತಗ್ಗು ಪ್ರದೇಶಗಳು ಜಾಲವೃತವಾಗುವ ಸಾಧ್ಯತೆ ಗಳು ಹೆಚ್ಚಾಗಿ ದೆ.
ಬಂಟ್ವಾಳ ತಾಲೂಕಿನ ನಾವೂರ, ಜಕ್ರಿಬೆಟ್ಟು, ಪಾಣೆಮಂಗಳೂರು, ಆಲಡ್ಕ ಸಹಿತ ಅನೇಕ ತಗ್ಗು ಪ್ರದೇಶದ ಜನರು ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಇದೆ.