ಒಡಿಯೂರು ಶ್ರೀಗಳವರ ಷಷ್ಠ್ಯಬ್ದ ಸಂಭ್ರಮದ ಪ್ರಯುಕ್ತ ಒಡಿಯೂರು ಶ್ರೀ ಷಷ್ಠ್ಯಬ್ದ ಸಂಭ್ರಮ ಸಮಿತಿಯ ವತಿಯಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ತಾ.8ನೇ ಗುರುವಾರ ಪೂರ್ವಾಹ್ಣ ಘಂಟೆ 10.00ಕ್ಕೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಹಾಗೂ ಸಾಧ್ವಿ ಶ್ರೀ ಶ್ರೀ ಮಾತಾನಂದಮಯೀಯವರ ದಿವ್ಯ ಉಪಸ್ಥಿತಿಯಲ್ಲಿ ’ಮನೆಗೊಂದು ಶ್ರೀ ಗಂಧದ ಗಿಡ-ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವವು ನಡೆಯಲಿರುವುದು.
ಬಂಟ್ವಾಳ ಶಾಸಕ ಯು. ರಾಜೇಶ್ ನಾಕ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುತ್ತೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವಿ.ಪಿ. ಕಾರ್ಯಪ್ಪ, ಮಂಗಳೂರು ವಲಯ ಅರಣ್ಯಾಧಿಕಾರಿ ಪಿ. ಶ್ರೀಧರ್, ಪುತ್ತೂರು ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕ, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳೆಗಾರ್, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಎಚ್.ಎಸ್. ತ್ಯಾಗರಾಜ್, ಬಂಟ್ವಾಳ ಸಾಮಾಜಿಕ ವಲಯ ಅರಣ್ಯಾಧಿಕಾರಿ ಎಸ್. ರವಿಕುಮಾರ್ ವಿಶೇಷ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.