ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ನೇತೃತ್ವದಲ್ಲಿ ಬಂಟ್ವಾಳ ಹನುಮಾನ್ ಮಂದಿರ ಬಡ್ಡಕಟ್ಟೆದಿಂದ ಕೈಕಂಬ ಜಂಕ್ಷನ್ ಬಿ. ಸಿ ರೋಡ್ ತನಕ ಸೈಕಲ್ ಜಾಥ ಮತ್ತು ಪೆಟ್ರೋಲ್ ಡೀಸೆಲ್ ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯನ್ನು ಖಂಡಿಸಿ ಪಾದಯಾತ್ರೆಯ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಕೆ,ಸಹಯಹಸ್ತ,ಕೆಪಿಸಿಸಿ ಬಂಟ್ವಾಳ ವಿಧಾನಸಭಾ ಉಸ್ತುವಾರಿಯಾದ ಸವಿತಾ ರಮೇಶ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಗಾಯತ್ರಿ ಶಾಂತೇ ಗೌಡ,ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ವೀಣಾ ಭಟ್,ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ ಶಾಹುಲ್ ಹಮೀದ್,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ,ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ,ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್, ಪುರಸಭಾ ಉಪಾಧ್ಯಕ್ಷರಾದ ಜೇಸಿಂತ ಡಿ’ಸೋಜ,ಮಹಾನಗರ ಪಾಲಿಕೆಯ ಸದಸ್ಯರಾದ ಮೊಹಮ್ಮದ್ ರೌಫ್,ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್,ಎಮ್ ಎಸ್ ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷರು ಹಾಗೂ ಜಿಲ್ಲಾ ಅಸಂಘಟಿತ ಕಾರ್ಮಿಕ ಅಧ್ಯಕ್ಷರಾದ ಅಬ್ಬಾಸ್ ಅಲಿ,ಜಿಲ್ಲಾ ಸಹಕಾರಿ ಸಂಘದ ಸಂಚಾಲಕರಾದ ಸುದರ್ಶನ್ ಜೈನ್,ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ,ಬಂಟ್ವಾಳ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರುಗಳಾದ ಮಲ್ಲಿಕಾ ವಿ ಶೆಟ್ಟಿ, ಶ್ರೀಮತಿ ಲವೀನಾ ವಿಲ್ಮ ಮೋರಸ್,ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಜೋರ, ಮೊಹಮ್ಮದ್ ನವಾಝ್ ಬಡಕಬೈಲು ಹಾಗೂ ಎಲ್ಲಾ ವಲಯ ಅಧ್ಯಕ್ಷರು ಬೂತ್ ಅಧ್ಯಕ್ಷರು ಪಂಚಾಯತ್ ಅಧ್ಯಕ್ಷರು ಪಂಚಾಯತ್ ಸದಸ್ಯರು ಮತ್ತು ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.