ಬಂಟ್ವಾಳ: ಬಂಟ್ವಾಳ ಗ್ರಾಮಾಂತರ, ವಿಟ್ಲ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಹಾಗೂ ಬೆಳ್ತಂಗಡಿ ವೃತ್ತ ಪೋಲೀಸ್ ಠಾಣಾ ವೃತ್ತ ನಿರೀಕ್ಷಕ ರಾಗಿ ಮೂವರು ಪೋಲೀಸ್ ಅಧಿಕಾರಿಗಳು ಇಂದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಪಿ.ಐ.ಠಾಣೆಯಾಗಿ ಮುಂಬಡ್ತಗೊಂಡ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಈ ಹಿಂದೆ ಬಂಟ್ವಾಳ ವೃತ್ತ ನಿರೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಟಿ.ಡಿ.ನಾಗರಾಜ್ ಅವರನ್ನು ನೇಮಕಗೊಳಿಸಿ ಅದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ಅವರು ಇಂದು ಬೆಳಿಗ್ಗೆ ಕರ್ತವ್ಯ ಹಾಜರಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಅವರು ಹೂ ಗುಚ್ಚ ನೀಡಿ ಅವರನ್ನು ಸ್ವಾಗತಿಸಿದರು.
ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಈ ಹಿಂದೆ ದ.ಕ.ಜಿಲ್ಲೆಯ ಅನೇಕ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ದ ಅನುಭವಿ ಅಧಿಕಾರಿ ನಾಗರಾಜ್ ಎಚ್.ಇ.ಅವರನ್ನು ವರ್ಗಾವಣೆ ಗೊಳಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಅವರು ಇಂದು ಕರ್ತವ್ಯ ಕ್ಕೆ ಹಾಜರಾಗಿದ್ದಾರೆ.
ಬಂಟ್ವಾಳ ಟ್ರಾಫಿಕ್ ಎಸ್. ಐ.ರಾಜೇಶ್ ಕೆ.ವಿ .ಅವರು ಹೂಗುಚ್ಚ ನೀಡ ಸ್ವಾಗತಿಸಿದರು
ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿ ಶಿವಕುಮಾರ್ ಬಿ.ಅವರು ಇಂದು ಬೆಳಿಗ್ಗೆ ಕರ್ತವ್ಯ ಕ್ಕೆ ಹಾಜರಾಗಿದ್ದಾರೆ.ಅವರನ್ನು ಬೆಳ್ತಂಗಡಿ ಎಸ್.ಐ.ನಂದಕುಮಾರ್ ಅವರು ಹೂ ಗುಚ್ಚ ನೀಡಿ ಸ್ವಾಗತಿಸಿದರು.