Saturday, April 6, 2024

28ರಂದು ಬಂಟ್ವಾಳದಲ್ಲಿ ಪತ್ರಿಕಾ ದಿನಾಚರಣೆ, ಸನ್ಮಾನ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಬಂಟ್ವಾಳ ಪ್ರೆಸ್ ಕ್ಲಬ್ ಸಹಯೋಗದೊಂದಿಗೆ ಬಿ.ಸಿ.ರೋಡ್ ನ ಪ್ರೆಸ್ ಕ್ಲಬ್ ನಲ್ಲಿ ಜುಲೈ 28ರಂದು ಬೆಳಗ್ಗೆ 10.30ಕ್ಕೆ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭ ಪತ್ರಿಕಾ ವಿತರಕರಿಗೆ ಸನ್ಮಾನ ನಡೆಯಲಿದೆ.


ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಬಂಟ್ವಾಳ ಉಪವಿಭಾಗ ಡಿವೈಎಸ್ಪಿ ವೆಲೆಂಟೈನ್ ಡಿಸೋಜ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್, ಬಂಟ್ವಾಳ ಪ್ರೆಸ್ ಕ್ಲಬ್ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಭಾಗವಹಿಸಲಿದ್ದಾರೆ. ದಿನಪತ್ರಿಕೆ ಮಾರಾಟಗಾರರಾದ ವಿಟ್ಲದ ರಾಜಮ್ಮ ಕೆ.ವಿ, ವಗ್ಗದ ಲೋಕಯ್ಯ ಗೌಡ, ಬಿ.ಸಿ.ರೋಡಿನ ಮಿತ್ತಬೈಲಿನ ನರಸಿಂಹ ಪೈರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...