ಪುಂಜಾಲಕಟ್ಟೆ : ಜುಲೈ 21 ರಂದು ನಡೆಯುವ ಬಕ್ರೀದ್ ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯಲ್ಲಿನ ಪ್ರಮುಖ ಧಾರ್ಮಿಕ ಮುಖಂಡರುಗಳನ್ನು ಕರೆಯಿಸಿ ಬಕ್ರೀದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ನಡೆಸಿದರು.
ಬೆಳ್ತಂಗಡಿ ಪೋಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರು ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಹಬ್ಬದ ಪ್ರಮುಖ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪುಂಜಾಲಕಟ್ಟೆ ಎಸ್ ಐ ಸೌಮ್ಯ ಉಪಸ್ಥಿತರಿದ್ದರು.