ಬಂಟ್ವಾಳ: ನೇತ್ರಾವತಿ ನದಿಯ ತಟದಲ್ಲಿ ಇದ್ದರೂ ಅದರಲ್ಲೂ ಮಳೆಗಾಲದಲ್ಲಿ ಕುಡಿಯುವ ನೀರಿಗೆ ಕೊರತೆ.
ಇದು ಬಂಟ್ವಾಳ ತಾಲೂಕಿನ ಸಜೀಪ ಮುನ್ನೂರು ಗ್ರಾ.ಪಂ.ನ ಶಾಂತಿ ನಗರದಲ್ಲಿ ಕಳೆದ ಮೂರು ದಿನಗಳಿಂದ ಆ ಭಾಗದ ಜನರಿಗೆ ಕುಡಿಯುವ ನೀರಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ.
ಬಂಟ್ವಾಳ ತಾಲೂಕಿನ ನೇತ್ರಾವತಿ ನದಿ ತೀರದ ಶಾಂತಿ ನಗರ ಪ್ರದೇಶದಲ್ಲಿ ಅನೇಕ ಬಡ ಕುಟುಂಬಗಳಿದ್ದು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ.
ಈ ಬಗ್ಗೆ ಇಲ್ಲಿನ ಸ್ಥಳೀಯ ಗ್ರಾ.ಪಂ.ನ ಅಧ್ಯಕ್ಷರ ಗಮನಕ್ಕೆ ತಂದರು ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಗ್ರಾಮದ ಮಹಿಳೆಯರು ನೇರವಾಗಿ ಸಜೀಪ ಮುನ್ನೂರು ಗ್ರಾಮಪಂಚಾಯತ್ ಗೆ ಲಗ್ಗೆಹಾಕಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷರ ಗಮನಕ್ಕೆ ತಂದು ಗ್ರಾ.ಪಂ.ಪಂಚಾಯತ್ ಗೆ ಶಾಂತಿ ನಗರ ನಿವಾಸಿಗಳು ಬಂದರು ಕೂಡ ಆಧ್ಯಕ್ಷೆ ಇವರ ಸಮಸ್ಯೆ ಯ ಬಗ್ಗೆ ತಲೆಕೆಡಿಸಿಕೊಂಡಿಲ್ಲ, ಗ್ರಾ.ಪಂ.ಗೂ ಆಗಮಿಸಿಲ್ಲ ಎಂದು ಮಹಿಳೆಯರು ದೂರಿದ್ದಾರೆ.
ಈ ಬಗ್ಗೆ ಸ್ಥಳೀಯ ಗ್ರಾಮಪಂಚಾಯತ್ ಸದಸ್ಯ ಹಾಗೂ ಕಾರ್ಯದರ್ಶಿ ಇವರ ಸಮಸ್ಯೆ ಯ ಬಗ್ಗೆ ಮಾಹಿತಿ ಪಡೆದು ಬಳಿಕ ಶೀಘ್ರದಲ್ಲೇ ನೀರಿನ ಸಮಸ್ಯೆ ಹೋಗಲಾಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಕುಡಿಯುವ ನೀರಿನ ಸಮಸ್ಯೆ ಗೆ ಉಂಟಾದ ತಾಂತ್ರಿಕ ಸಮಸ್ಯೆ ಯ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು.