Thursday, April 18, 2024

*ಅಮೃತ ಪ್ರಕಾಶ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆ*

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ ಎಂಟನೇ ವಾರ್ಷಿಕೋತ್ಸವ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಿತು.

ಸೂರ್ಯವಂಶ ಪ್ರತಿಷ್ಠಾನ ಕೈಕಂಬ ಬಿ.ಸಿ.ರೋಡ್ ಇದರ ಸಂಸ್ಥಾಪಕರಾದ ಪ್ರೊ.ಡಾ. ಗೋವರ್ಧನ ರಾವ್ ಅಧ್ಯಕ್ಷತೆ ವಹಿಸಿದ್ದರು.ಖ್ಯಾತ ದಂತ ವೈದ್ಯ ಸಾಹಿತಿ, ಗೃಹ ರಕ್ಷಕ ದಳದ ಜಿಲ್ಲಾ

ಸಮಾದೇಷ್ಟರಾದ ಡಾ. ಮುರಲಿ ಮೋಹನ್ ಚೂಂತಾರು ಅವರು ಅಮೃತ ಪ್ರಕಾಶ ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಸಮಾಜ ಸೇವಕಿ, ಲೇಖಕಿ ಸುಜಾತ ಸುವರ್ಣ ಉಪಸ್ಥಿತರಿದ್ದರು. ಡಾಕ್ಟರ್ ಮಾಲತಿ ಶೆಟ್ಟಿ ಮಾಣೂರು ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಶಿಕ್ಷಕಿ, ಕವಯತ್ರಿ ಸುರೇಖಾ ಯಾಲವಾರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...