ಬಂಟ್ವಾಳ: ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರೋಟರಿ ಕ್ಲಬ್ ಬಂಟ್ವಾಳ ವತಿಯಿಂದ ಸಾಧಾರಣ ಕಡಿಮೆ ತೂಕ ಹಾಗೂ ವಿಪರೀತ ಕಡಿಮೆ ತೂಕ ಇರುವ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು.
ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಷ್ಪಲತಾ, ಮಕ್ಕಳ ತಜ್ಞ ಡಾ.ಸಂದೀಪ್, ರೋಟರಿ ಪ್ರಮುಖರಾದ ಮೊಹಮ್ಮದ್ ವಳವೂರು, ರಿತೇಶ್ ಬಾಳಿಗಾ, ಧನಂಜಯ ಬಾಳಿಗಾ, ಸಿಡಿಪಿಒ ಗಾಯತ್ರಿ ಕಂಬಳಿ, ಸಹಾಯಕ ಸಿಡಿಪಿಒ ಶೀಲಾವತಿ, ಹಿರಿಯ ಮೇಲ್ವಿಚಾರಕಿ ಶಾಲಿನಿ, ಮೇಲ್ವಿಚಾರಕಿ ಗುಣವತಿ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.