Thursday, April 11, 2024

ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಇಮ್ತಿಯಾಝ್ ತುಂಬೆ ಮರು ಆಯ್ಕೆ

 

ಬಂಟ್ವಾಳ, ಜು.10: ಮುಡಿಪು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ ಮುಹಮ್ಮದ್ ಇಮ್ತಿಯಾಝ್ ತುಂಬೆ ಎರಡನೇ ಬಾರಿಗೆ ಮರು ನೇಮಕಗೊಂಡಿದ್ದಾರೆ.

ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರ ನಿರ್ದೇಶನದಂತೆ, ಮುಡಿಪು ಬ್ಲಾಕ್ ಅಧ್ಯಕ್ಷ ಪ್ರಶಾಂತ್ ಖಾಜವ ಅವರ ಶಿಫಾರಸಿನ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್ ಅವರು ಮುಹಮ್ಮದ್ ಇಮ್ತಿಯಾಝ್ ತುಂಬೆ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರಿನ ಮಲ್ಲಿಕ್ಕಟ್ಟೆ ಕಾಂಗ್ರೆಸ್ ಭವನದಲ್ಲಿ ಪಕ್ಷದ ಪ್ರಮುಖ ನಾಯಕರ ಸಮ್ಮುಖದಲ್ಲಿ ಇಮ್ತಿಯಾಝ್ ತುಂಬೆ ಅವರು ಇಂದು ನೇಮಕಾತಿ ಆದೇಶ ಪತ್ರ ಸ್ವೀಕರಿಸಿದರು.

ತುಂಬೆ ಗ್ರಾಮದ ನಿವಾಸಿಯಾಗಿರುವ ಮುಹಮ್ಮದ್ ಇಮ್ತಿಯಾಝ್ ತುಂಬೆ ಪದವೀಧರರಾಗಿದ್ದು ಮುಡಿಪು ಬ್ಲಾಕ್ ಕಾಂಗ್ರೆಸ್ ನ ಸಕ್ರಿಯ ಕಾರ್ಯಕರ್ತರಾಗಿದ್ದಾರೆ.

ಅವರು ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು ರಾಜಕೀಯದ ಜೊತೆ ಸಾಮಾಜಿಕವಾಗಿಯೂ, ಧಾರ್ಮಿಕವಾಗಿಯೂ ಗುರುತಿಸಿಕೊಂಡಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...