Sunday, April 7, 2024

ಕಾರು ಬೈಕ್ ಅಪಘಾತದ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ!

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆ.

ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು.

ಬಂಟ್ವಾಳ ತಾಲೂಕಿನ ಬಂಟ್ವಾಳ ಧರ್ಮಸ್ಥಳ ರಸ್ತೆಯ ಭಂಡಾರಿಬೆಟ್ಟು ಎಸ್ಕೇಪ್ ರಸ್ತೆಯ ತಿರುವುನಲ್ಲಿ ಶನಿವಾರ ಸಂಜೆ ಅಪಘಾತ ನಡೆದಿದೆ.

ಅಪಘಾತದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.

ಅಪಘಾತದಲ್ಲಿ ಕಕ್ಯೆಪದವು ನಿವಾಸಿ ಕೃಷ್ಣಮಯ್ಯ ಅವರಿಗೆ ಸಣ್ಣ ಪುಟ್ಟ ಗಾಯ ಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಜೊತೆ ಸಹ ಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅಪಾಯ ವಿಲ್ಲದೆ ಪಾರಾಗಿದ್ದಾರೆ.

ಬಂಟ್ವಾಳ ಬೈಪಾಸ್ ರಸ್ತೆಯಿಂದ ಬಂಟ್ವಾಳ ಪೇಟೆಗೆ ಭಂಡಾರಿ ಬೆಟ್ಟು ಎಂಬಲ್ಲಿಂದ ಎಸ್ಕೇಪ್ ರೋಡ್ ಗೆ ಕ್ರಾಸ್ ಮಾಡುವ ವೇಳೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಆಲ್ಟೋ ಕಾರು ಹಿಂಬದಿಯಿಂದ ಬೈಕ್ ಗೆ ಡಿಕ್ಕಿ ಹೊಡೆಯುವ ದೃಶ್ಯ ಸಿ‌ಸಿಟಿ.ವಿಯಲ್ಲಿ ಸೆರೆಯಾಗಿದೆ.

ಅಪಘಾತದ ರಭಸಕ್ಕೆ ಬೈಕ್ ಸವಾರಿಬ್ವರು ರಸ್ತೆಯ ಮೇಲೆ ಎಸೆಯುವ ದೃಶ್ಯ ಕೂಡ ಇದೆ.

ಅದೃಷ್ಟವಶಾತ್ ಬೈಕ್ ಸವಾರ ಕೃಷ್ಣ ಮಯ್ಯ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಜೊತೆಗೆ ಸಹಸವಾರ ಸಹೋದರ ಸೂರ್ಯನಾರಾಯಣ ಮಯ್ಯ ಅವರಿಗೆ ಯಾವುದೇ ಗಾಯಗಳಾಗದೆ ಪಾರಾಗಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More from the blog

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಶ್ರಮಿಸಿದ ಸ್ವಯಂಸೇವಕರಿಗೆ ಕೃತಜ್ಞತಾ ಸಭೆ

ಬಂಟ್ವಾಳ: ದೇವಸ್ಥಾನದ ನಿರ್ಮಾಣ ಮಾಡಿದರೆ,ಸಾಲದು ಅದರ ಪ್ರಭಾವ ಇನ್ನಷ್ಟು ಬೆಳಗಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಬೇಕಾಗಿದೆ ಎಂದು ಶ್ರೀ ಧಾಮ ಮಾಣಿಲ ಕ್ಷೇತ್ರದ ಯೋಗಿ ಕೌಸ್ತುಭ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ...

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...