Friday, April 5, 2024

ಬಂಟ್ವಾಳ ಘಟಕದಲ್ಲಿ ಸಸಿ ನೆಡುವ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ಘಟಕದ ವತಿಯಿಂದ, ಬಿ.ಸಿ ರೋಡ್ ಗೃಹರಕ್ಷಕದಳ ಕಛೇರಿಯ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಾಗೂ ಸಸಿ ಹಂಚುವ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅಧ್ಯಕ್ಷತೆಯನ್ನು ವಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ಈ ವರ್ಷದಲ್ಲಿ ಸುಮಾರು 1000 ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ವರೆಗೆ ಸುಮಾರು 800 ಗಿಡಗಳನ್ನು ನೆಡಲಾಗಿದೆ. ಗಿಡ ನೆಟ್ಟು ಹಸಿರು ಬೆಳೆಸಿದಲ್ಲಿ ಆರೋಗ್ಯ ಪೂರ್ಣ ಸಮಾಜ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಸಿಗಳನ್ನು ನೆಡುವ ಕಾರ್ಯ ಯೋಜನೆ ಸಿದ್ದಪಡಿಸಲಾಗಿದೆ ಎಂದು ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ನುಡಿದರು.
ಗೃಹರಕ್ಷಕದಳದ ಕಛೇರಿ ಆವರಣದಲ್ಲಿ ೨೫ ಗಿಡಗಳನ್ನು ನೆಡಲಾಯಿತು. ಗಿಡಗಳನ್ನು ನೆಡುವುದರ ಜೊತೆಗೆ ಗೃಹರಕ್ಷಕರಿಗೆ ಉಚಿತವಾಗಿ ಸಸಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಘಟಕದ ಘಟಕಾಧಿಕಾರಿಯಾದ ಐತಪ್ಪ ಹಾಗೂ ಗೃಹರಕ್ಷಕ ಮತ್ತು ಗೃಹರಕ್ಷಕಿಯರು ಉಪಸ್ಥಿತರಿದ್ದರು.

 

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...