ಬಂಟ್ವಾಳ: ಬಂಟ್ವಾಳ ತಾಲೂಕು ಪಂಚಾಯತ್ ಹಾಗೂ ಬಂಟ್ವಾಳ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಅಂತಾರಾಷ್ಟ್ರೀಯ ಜೀವ ವೈವಿಧ್ಯ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನಾಚರಣೆಯು ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಅವರು ಅಧ್ಯಕ್ಷತೆ ವಹಿಸಿದ್ದರು. ದಿನೇಶ್ ನಾಯಕ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಸಾಮಾಜಿಕ ಅರಣ್ಯದ ವಲಯ ಅರಣ್ಯಾಧಿಕಾರಿ ರವಿಕುಮಾರ್, ವಿವಿಧ ಪಂಚಾಯತ್ ಗಳ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು ಉಪಸ್ಥಿತರಿದ್ದರು.