ಬಂಟ್ವಾಳ: ಶಂಭೂರು ಎ.ಎಂ.ಆರ್.ಡ್ಯಾಂ ನಲ್ಲಿ ಅಪರಿಚಿತ ಶವ ಪತ್ತೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶಂಭೂರು ಡ್ಯಾಂ ನ ಬಳಿಯಲ್ಲಿ ಸುಮಾರು 50. ವರ್ಷದ ಗಂಡಸಿನ ಶವ ಕಂಡು ಬಂದ ಹಿನ್ನೆಲೆಯಲ್ಲಿ ಡ್ಯಾಂ ನ ಸಿಬ್ಬಂದಿ ಗಳು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅಪರಿಚಿತ ಶವವಾದ ಹಿನ್ನೆಲೆಯಲ್ಲಿ ಬಂಟ್ವಾಳ ಶವಗಾರದಲ್ಲಿ ಇಡಲಾಗಿದೆ ಎಂದು ಬಂಟ್ವಾಳ ಗ್ರಾಮಾಂತರ ಎಸ್.ಐ. ಪಸನ್ನ ತಿಳಿಸಿದ್ದಾರೆ.