Saturday, April 6, 2024

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಸಂಘಟನೆಯ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

ಬಂಟ್ವಾಳ: ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಸಂಘಟನೆಯ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮವು ಬಿ.ಸಿ.ರೋಡಿನ ಹೋಟೆಲ್ ರಂಗೋಲಿ ಸಭಾಂಗಣದಲ್ಲಿ ನಡೆಯಿತು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಕೊರೊನಾದಿಂದ ರಕ್ತದ ಕೊರತೆ ಎದುರಾದಾಗ ಸಾಕಷ್ಟು ಸಂಘಟನೆಗಳು ರಕ್ತದಾನದ ಕಾರ್ಯ ಮಾಡಿದ್ದು, ರಾಜಕೇಸರಿ ಸಂಘಟನೆಯೂ ಆ ಕಾರ್ಯದಲ್ಲಿ ಕೈಜೋಡಿಸಿದೆ. ಕೊರೊನಾವನ್ನು ಎದುರಿಸುವಲ್ಲಿ ಭಾರತ ಕೈಗೊಂಡ ನಿರ್ಧಾರಗಳು ಜಗತ್ತಿನಲ್ಲೇ ಮಾದರಿಯಾಗಿದೆ ಎಂದರು.

ಉದ್ಘಾಟಿಸಿದ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಮಾತನಾಡಿ, ಸ್ವಾಮಿ ವಿವೇಕಾನಂದರ ಆದರ್ಶದೊಂದಿಗೆ ರಾಜಕೇಸರಿ ಸಂಘಟನೆ ಕೆಲಸ ಮಾಡುತ್ತಿದ್ದು, ಶಿಕ್ಷಣ, ಆರೋಗ್ಯ ಇನ್ನಿತರ ಸೇವಾ ಚಟುವಟಿಕೆಗಳಿಗೆ ಈಗಾಗಲೇ ಲಕ್ಷಾಂತರ ರೂ. ನೆರವು ನೀಡಿದೆ ಎಂದರು.

ವೇದಿಕೆಯಲ್ಲಿ ದಂಡೆ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕ ಗಣೇಶ್‌ಪ್ರಸಾದ್ ಉಡುಪ, ಕಟ್ಟೆಮಾರ್ ಶ್ರೀ ಮಂತ್ರದೇವತೆ ಕ್ಷೇತ್ರದ ಧರ್ಮದರ್ಶಿ ಮನೋಜ್ ಕಟ್ಟೆಮಾರ್, ಬಜರಂಗ ದಳ ವಿಟ್ಲ ಪ್ರಖಂಡದ ಮಾಜಿ ಸಂಚಾಲಕ ಅಕ್ಷಯ್ ರಜಪೂತ್, ಜಿಲ್ಲಾ ಮಾನವ ಹಕ್ಕು ರಕ್ಷಣಾ ಘಟಕದ ಮೇಲ್ವಿಚಾರಕ ಲೋಕನಾಥ್‌ದಾಸ್, ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ, ರಾಜಕೇಸರಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಕಾರ್ತಿಕ್ ಬೆಳ್ತಂಗಡಿ, ವೆನ್ಲಾಕ್ ರಕ್ತನಿಧಿ ಉಸ್ತುವಾರಿ ಆ್ಯಂಟನಿ, ವೈದ್ಯಾಽಕಾರಿ ಡಾ| ದೀಪಕ್, ಕಳ್ಳಿಗೆ ಗ್ರಾ.ಪಂ.ಉಪಾಧ್ಯಕ್ಷ ದಾಮೋದರ ನೆತ್ತರಕೆರೆ, ಹಿಂಜಾವೇ ಜಿಲ್ಲಾ ಸಂಚಾಲಕ ಚಂದ್ರ ಕಲಾಯಿ, ಮಾಣಿ ಶಾರದಾ ಯುವ ವೇದಿಕೆಯ ಅಧ್ಯಕ್ಷ ಭರತ್ ಶೆಟ್ಟಿ, ಎಸ್‌ಕೆಪಿಎ ಬಂಟ್ವಾಳ ವಲಯದ ಮಾಜಿ ಅಧ್ಯಕ್ಷ ಹರೀಶ್ ಕುಲಾಲ್, ಉದ್ಯಮಿ ಸಂದೀಪ್ ಗೌಡ, ಬಂಟ್ವಾಳ ಹಿಂದೂ ಯುವಸೇನೆಯ ಅಧ್ಯಕ್ಷ ಪುಷ್ಪರಾಜ್ ಬಂಟ್ವಾಳ, ಪ್ರಮುಖರಾದ ಸದಾನಂದ ಹಳೆಗೇಟು, ಮಹೇಶ್ ಶೆಟ್ಟಿ ಜುಮಾದಿಗುಡ್ಡೆ, ಬಂಟ್ವಾಳ ಘಟಕದ ಅಧ್ಯಕ್ಷ ನವೀನ್ ಮಾಣಿ, ಕಾರ್ಯದರ್ಶಿ ಚೇತನ್ ಕಲ್ಲಡ್ಕ, ಸಂಚಾಲಕ ಪ್ರಸಾದ್ ಬಸವನಬೈಲು ಮೊದಲಾದವರಿದ್ದರು.

ಸುದೀಪ್ ಸ್ವಾಗತಿಸಿ, ವಂದಿಸಿದರು. ಘಟಕದ ಸಂಘಟನಾ ಕಾರ್ಯದರ್ಶಿ ಸುರೇಶ್ ಎಸ್.ನಾವೂರು ಕಾರ್ಯಕ್ರಮ ನಿರ್ವಹಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...