ಬಂಟ್ವಾಳ: ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಗಸ್ಟ್ 12 ರಂದು ಗುರುವಾರ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಅಧಿಕೃತ ಮೂಲಗಳು ತಿಳಿಸಿವೆ.
ಕರಾವಳಿಯಲ್ಲಿ ಕೋವಿಡ್ ನಿಯಂತ್ರಣ ಸಾಧಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮುಖ್ಯ ಮಂತ್ರಿಗಳ ಕೋವಿಡ್ ಸಂಬಂಧಿಸಿದ ಸಭೆಯಲ್ಲಿ ಜಿಲ್ಲೆಯ ಸಂಸದ, ಶಾಸಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ , ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ದ ಬಳಿಕ ಉಡುಪಿಯ ಲ್ಲಿ ಮೂರು ಗಂಟೆಗೆ ಉಡುಪಿ ಜಿಲ್ಲೆಯ ಸಂಸದ ಶಾಸಕ ಹಾಗೂ ಅಧಿಕಾರಿಗಳ ಜೊತೆ ಕೋವಿಡ್ ವಿಚಾರದಲ್ಲಿ ಸಭೆ ನಡೆಸಲಿದ್ದಾರೆ.