Friday, April 5, 2024

ಕೋವಿಡ್-19 ನಿಯಂತ್ರಣ ಸಂಬಂಧ ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಭೆ

ಮಂಗಳೂರು: ಮುಖ್ಯಮಂತ್ರಿಯಾದ ಬಳಿಕ ಪ್ರಥಮ‌ವಾಗಿ ಮಂಗಳೂರಿಗೆ ಬೇಟಿ ನೀಡಿದ ಸಿ.ಎಂ.ಬಸವರಾಜ್ ಬೊಮ್ಮಾಯಿ ಅವರು ಕೋವಿಡ್-19 ನಿಯಂತ್ರಣ ಸಂಬಂಧ ಮಂಗಳೂರಿನಲ್ಲಿರುವ ಜಿ.ಪಂ. ನ ನೇತ್ರಾವತಿ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಕೋವಿಡ್ ವಿಚಾರಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರಗೆ ಸಿಎಂ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು.

ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಎಂದು ತರಾಟೆಗೆ ತೆಗೆದುಕೊಂಡರು. ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಎಂದು ಗರಂ ಆದ ಸಿ.ಎಂ.ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ ಎಂದು ಪ್ರಶ್ನಿಸಿದರು.

ಎಸ್ ಡಿಆರ್ ಎಫ್ ಫಂಡ್ ಅದು, ಇದು ಪಡೆದು ಇವತ್ತೇ ಖರೀದಿ ಮಾಡಿ ವರದಿ ನೀಡುವಂತೆ ಸೂಚಿಸಿದರು. ಬೆಂಗಳೂರು ಬಿಟ್ಟು ಎಲ್ಲವನ್ನೂ ಇಲ್ಲೇ ಖರೀದಿಸಿ ಸಂಜೆ ನನಗೆ ರಿಪೋರ್ಟ್ ಮಾಡಿ ಎಂದು ಸೂಚನೆ ನೀಡಿದ ಅವರು

ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಅವರನ್ನು ಬೊಮ್ಮಾಯಿ ತರಾಟೆಗೆ ತೆಗೆದುಕೊಂಡರು ಏನಯ್ಯ, ನೀನ್ ಏನ್ ಮಾಡ್ತಾ ಇದೀಯ ಇಲ್ಲಿ ಅಂತ ಹೇಳು ಎಂದು ಕೇಳಿದರು.

ನಿನ್ನತ್ರ ಏನು ಸಮಸ್ಯೆ ಇದೆ ಅಂತ ಡಿಸಿ ಗಮನಕ್ಕೆ ತರೋಕೆ ಗೊತ್ತಿಲ್ವಾ? ಮತ್ತೇನು ಕೆಲಸ ಮಾಡುತ್ತೀರಿ ನೀವು ಎಂದು ಅವರನ್ನು ಪ್ರಶ್ನಿಸಿದ್ದಾರೆ.

ಮೋಸ್ಟ್ ಸೀನಿಯರ್ ಹೆಲ್ತ್ ಆಫೀಸರ್ ಆಗಿದ್ರೂ ನೀನ್ ಏನ್ ನಿದ್ದೆ ಮಾಡ್ತಾ ಇದೀಯಾ, ಮಾಸ್ಕ್, ಗ್ಲೌಸ್ ಎಷ್ಟು ಕೊರತೆ ಇದೆ ಅನ್ನೋದು ಲೆಕ್ಕ ಇಡೋಕೆ ಆಗಲ್ವಾ ನಿಂಗೆ, ಎಂದು ಕೇಳಿದಾಗ ಸಮರ್ಥ ನೆ ನೀಡಲು ಮುಂದಾದ ಅಧಿಕಾರಿಗೆ ನಿಮ್ಮ ಯಾವುದೇ ಸಮರ್ಥನೆ ನಂಗೆ ಬೇಡ, ಸಂಜೆಯೊಳಗೆ ನಂಗೆ ರಿಪೋರ್ಟ್ ಕೊಡಿ ಎಂದು ಸಿ.ಎಂ. ತಿಳಿಸಿದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...