Sunday, April 7, 2024

ಮಾದರಿ ಎರೆಹುಳ ಘಟಕ ಉದ್ಘಾಟನೆ

ಬಂಟ್ವಾಳ: ಬಿ.ಸಿ.ರೋಡಿನ ತೋಟಗಾರಿಕಾ ಇಲಾಖೆ ಆವರಣದಲ್ಲಿ ಬಂಟ್ವಾಳ ತಾ.ಪಂ.ವತಿಯಿಂದ ಬಂಟ್ವಾಳ ತೋಟಗಾರಿಕಾ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ನಿರ್ಮಿಸಲಾದ ಮಾದರಿ ಎರೆಹುಳ ಘಟಕವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಉದ್ಘಾಟಿಸಿ ನರೇಗಾದ ಮೂಲಕ ಬಂಟ್ವಾಳ ತಾಲೂಕು ಮಟ್ಟದ ರೈತಬಂಧು ಅಭಿಯಾನಕ್ಕೆ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಅವರು, ಎರೆಹುಳ ಕಸವನ್ನು ತಿಂದು ರಸ ಕೊಡುವ ಪ್ಯಾಕ್ಟರಿಯಾಗಿದ್ದು, ಇದರ ಗೊಬ್ಬರ ಸಾವಯವ ಕೃಷಿಗೆ ಉತ್ತೇಜನ ನೀಡುತ್ತದೆ. ರಾಸಾಯನಿಕ ಗೊಬ್ಬರದ ಪ್ರಭಾವದಿಂದ ಎರೆಹುಳ ಗೊಬ್ಬರ ನಶಿಸಿ ಹೋಗುವ ಅಪಾಯವಿದ್ದು, ಅದನ್ನು ಉಳಿಸುವ ಪ್ರಯತ್ನವೂ ಇದಾಗಿದೆ. ಸರಕಾರ ಪ್ರತಿ ಗ್ರಾ.ಪಂ.ಮಟ್ಟದಲ್ಲಿ ೨೫ ಎರೆಹುಳ ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಿದೆ ಎಂದರು.
ಬಂಟ್ವಾಳ ತಾ.ಪಂ.ಇಒ ರಾಜಣ್ಣ ಮಾತನಾಡಿ, ರೈತಬಂಧು ಅಭಿಯಾನದ ಮೂಲಕ ಎರೆಹುಳ ಗೊಬ್ಬರ ಘಟಕ ಸ್ಥಾಪನೆಗೆ ೨೭ ಸಾವಿರ ರೂ. ನೀಡಲಾಗುತ್ತಿದೆ. ಇದರ ಅನುಷ್ಠಾನದ ಕುರಿತು ಗ್ರಾ.ಪಂ.ಪಿಡಿಒಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ರೈತರಿಂದ ಬೇಡಿಕೆ ತೆಗೆದುಕೊಂಡು ಅನುಷ್ಠಾನಗೊಳಿಸುವ ಕಾರ್ಯ ಮಾಡಲಾಗುತ್ತದೆ ಎಂದರು.
ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಕೇಶವಮೂರ್ತಿ, ಕ್ಷೇತ್ರ ಶಿಕ್ಷಣಾಽಕಾರಿ ಜ್ಞಾನೇಶ್ ಎಂ.ಪಿ, ತಾಂತ್ರಿಕ ಅಽಕಾರಿ ನಂದನ್ ಶೆಣೈ, ತಾ.ಪಂ.ಸಹಾಯಕ ನಿರ್ದೇಶಕ ದಿನೇಶ್, ವ್ಯವಸ್ಥಾಪಕಿ ಶಾಂಭವಿ ರಾವ್, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು, ತೋಟಗಾರಿಕಾ ಇಲಾಖೆ ಸಿಬಂದಿ, ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಯಶೋಧರ ಕರ್ಬೆಟ್ಟು ಉಪಸ್ಥಿತರಿದ್ದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...