ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬಂಟ್ವಾಳ ಇದರ ಆಶ್ರಯದಲ್ಲಿ ಸ್ವಚ್ಛಭಾರತ್ ಮಿಷನ್ (ಗ್ರಾ) ಯೋಜನೆ ಹಂತ- 2ರಡಿ ಗ್ರಾಮ ಪಂಚಾಯತ್‌ಗಳಲ್ಲಿ ODF PLUS ಚಟುವಟಿಕೆಗಳನ್ನು ಅನುಷ್ಠಾನ ಹಾಗೂ ದ್ರವ ತ್ಯಾಜ್ಯ ನಿರ್ವಹಣೆ ಕುರಿತಾಗಿ ತಾಲೂಕು ಮಟ್ಟದ ಕಾರ್ಯಗಾರ ನಡೆಯಿತು.
ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ರಾಜಣ್ಣರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಕಾರ್ಯಗಾರದಲ್ಲಿ ಭಾಗವಹಿಸಿದ್ದರು.
ಸ್ವಚ್ಛ ಭಾರತ್ ಮಿಷನ್‌ನ ಜಿಲ್ಲಾ ಸಮಾಲೋಚಕರಾದ ನವೀನ್ ಮತ್ತು ಡೊಂಬಯ್ಯ ಇವರು ಕಾರ್ಯಗಾರವನ್ನು ನಡೆಸಿಕೊಟ್ಟರು.