ಬಂಟ್ವಾಳ: ಎಸೆಸೆಲ್ಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ ಅವರು ಪೂರ್ಣ ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ.
ಬಂಟ್ವಾಳ ತ್ಯಾಗರಾಜ ರಸ್ತೆ ನಿವಾಸಿ ಎನ್. ವೆಂಕಟೇಶ್ ಮಲ್ಯ ಹಾಗೂ ರಾಧಿಕಾ ಮಲ್ಯ ಅವರ ಪುತ್ರನಾಗಿರುವ ಪ್ರತೀಕ್ ಅವರು ಮುಂದೆ ಉದ್ಯಮಿಯಾಗುವ ಗುರಿ ಹೊಂದಿದ್ದಾರೆ. ತನ್ನ ಸಾಧನೆಗೆ ಶಿಕ್ಷಕರ ಪ್ರೋತ್ಸಾಹ, ಪೋಷಕರು, ಮನೆಯವರ ಬೆಂಬಲವೇ ಕಾರಣವಾಗಿದೆ. ಮುಂದೆ ಪಿಯುಸಿಯಲ್ಲಿ ವಾಣಿಜ್ಯ ವಿಭಾಗದಲ್ಲಿ ಕಲಿಯುವ ಆಸಕ್ತಿ ಹೊಂದಿದ್ದಾರೆ.