ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಗಸ್ಟ್ 4 ಬುಧವಾರದಿಂದ ಸೇವೆಗಳನ್ನು ಸ್ಥಗಿತಗೊಳಿಸುವಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ನೆರೆಯ ಕೇರಳ ಮತ್ತು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಕಾರಣದಿಂದ ಹೊರ ಜಿಲ್ಲೆ, ರಾಜ್ಯದವರು ಇಲ್ಲಿಗೆ ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳದಲ್ಲಿ ಸೇವೆಗಳನ್ನು ಸ್ಥಗಿತ ಮಾಡಲು ಸೂಚನೆ ನೀಡಲಾಗಿದೆ.