Wednesday, April 10, 2024

ರೈತ ಮೋರ್ಚಾದ ಮೂಲಕ ಕೃಷಿಗೆ ಪೂರಕವಾದ ಕಾರ್ಯಗಾರ ನಡೆಸಲು ಚಿಂತನೆ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ರೈತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಕೃಷಿಗೆ ಪೂರಕವಾದ ತಂತ್ರಜ್ಞಾನದ ವಿಚಾರಗಳನ್ನು ರೈತ ಮೋರ್ಚಾದ ಮೂಲಕ ಕಾರ್ಯಾಗಾರಗಳನ್ನು ನಡೆಸಲು ಚಿಂತನೆ ನಡೆಸಿ ದರೆ ಕೃಷಿಕ ರಿಗೆ ಸಹಾಯವಾಗುತ್ತದೆ ಜೊತೆಗೆ ಬಿಜೆಪಿ ಸಂಘಟನಾತ್ಮಕ ವಾಗಿ ಬೆಳೆಯಬಹುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಅವರು ಬಿಸಿರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಭಾರತದ ಕೃಷಿಕರ ಆರ್ಥಿಕತೆಯನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರು ಕೃಷಿಗೆ ಸಹಕಾರಿಯಾಗುವ ಅನೇಕ ಯೋಜನೆ ಗಳನ್ನು ಜಾರಿಮಾಡಿದ್ದಾರೆ.

ಪಂಚಾಯತ್ ನಿಂದ ಸಂಸದರ ರವರೆಗೆ ಬಿಜೆಪಿ ಪಕ್ಷ ಸಂಘಟನಾತ್ಮಕ ವಾಗಿ ಬೆಳೆಯುತ್ತಿರುವುದನ್ನು ಸಹಿಸಲು ಸಾಧ್ಯ ವಾಗ ವಿರೋಧ ಪಕ್ಷಗಳು ದೇಶ ದ್ರೋಹಿಗಳು ಸರಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದೆ.
ಕೊರೊನಾ ಸೊಂಕು ನಿಯಂತ್ರಣ ಹಾಗೂ ದೇಶದ ಅರ್ಥಿಕ ವ್ಯವಸ್ಥೆಯಲ್ಲಿ ಉತ್ತಮ ಸ್ಥಿತಿಯಲ್ಲಿ ಭಾರತ ಇದೆ ಎಂಬುದರ ಬಗ್ಗೆ ನಾವು ಹೆಮ್ಮೆ ಪಡಬೇಕಾಗಿದೆ ಎಂದರು.

ಬಲಿಷ್ಠ ನಾಯಕತ್ವದ ಅಡಿಯಲ್ಲಿ ಭಾರತ ದೇಶ ಉತ್ತಮ‌ಹಾದಿಯಲ್ಲಿ ಹೋಗುತ್ತಿರುವುದು ನಮಗೆಲ್ಲ ಸಂತಸದ ವಿಚಾರ ಎಂದು ಅವರು ಹೇಳಿದರು.
ಕೇರಳಕ್ಕೆ ವಿದ್ಯುತ್ ಹೈ ಪವರ್ ತಂತಿಗಳು ಹಾದು ಹೋಗುವ ರೈತರ ಜಮೀನಿನ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದ್ದು ರೈತರಿಗೆ ಅನ್ಯಾಯವಾಗದ ರೀತಿಯಲ್ಲಿ ಪರಿಹಾರವನ್ನು ಒದಗಿಸುವ ಕೆಲಸ ರೈತ ಮೋರ್ಚಾ ದ ಮೂಲಕ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ಬಿಜೆಪಿ ಪಕ್ಷದ ಜೊತೆಜೊತೆಯಲ್ಲಿ ಸಂಘಟನೆಗೆ ಪೂರಕವಾಗಿ ಕೆಲಸ ಕಾರ್ಯಗಳನ್ನು ಮಾಡಲು ರೈತ ಮೋರ್ಚಾ ರಚನೆಯಾಗಿದೆ ಎಂದರು.
ಜಿಲ್ಲಾ ಮೋರ್ಚಾದ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಕೃಷಿಯಲ್ಲಿ ಹೊಸಹೊಸ ಮೂಲಕ ಸಾಧನೆ ಮಾಡಿದ ಜಿಲ್ಲೆಯ ಹೆಮ್ಮೆಯ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಎಂದು ಅವರು ಹೇಳಿದರು.

ವೇದಿಕೆಯ ಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ದ ಉಪಾಧ್ಯಕ್ಷ ತೀರ್ಥರಾಮ್ , ಜಿಲ್ಲಾ ರೈತ ಮೋರ್ಚಾದ ಪ್ರಭಾರಿ ಮುಳಿಯ ಕೇಶವ ಭಟ್ , ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

ಜಿಲ್ಲಾ ಕಾರ್ಯದರ್ಶಿ ಸಂಜೀವ ಪೂಜಾರಿ ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ವಿಜಯ ರೈ ವಂದಿಸಿದರು. ಪ್ರಧಾನ ಕಾರ್ಯದರ್ಶಿ ವಸಂತ ಅಣ್ಣಳಿಕೆ ಕಾರ್ಯಕ್ರಮ ನಿರೂಪಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...