Sunday, April 21, 2024

*ಪತ್ರಕರ್ತರ ನಿವೇಶನಕ್ಕೆ ಜಾಗ ಕಾಯ್ದಿರಿಕೆ: ತಹಶೀಲ್ದಾರ್*

ಮಂಗಳೂರು: ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಪತ್ರಕರ್ತರಿಗೆ ಈಗಾಗಲೇ ನಿವೇಶನ ದೊರೆತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರಿಗೆ ಮಂಗಳೂರು ತಾಲೂಕಿನಲ್ಲಿ ಜಾಗ ಕಾಯ್ದಿರಿಸಲಾಗಿದ್ದು, ಕಡತವನ್ನು ಶೀಘ್ರದಲ್ಲೇ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಹೇಳಿದರು.

ಪತ್ರಕರ್ತರಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮವನ್ನು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಲವು ಸಮಯದಿಂದ ಬೇಡಿಕೆಯನ್ನು ಸಲ್ಲಿಸುತ್ತಿದ್ದಾರೆ. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲೆಯ ಶಾಸಕರುಗಳ ಮುಖೇನ ಈಗಾಗಲೇ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿವೇಶನಕ್ಕೆ ಮನವಿ ಸಲ್ಲಿಸಿದ್ದು, ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಕೂಡಲೇ ನಿವೇಶನಕ್ಕೆ ಜಾಗ ಗುರುತಿಸಿ ಸೂಕ್ತ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದರು. ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರ ಸೂಚನೆ ಮೇರೆಗೆ ಮಂಗಳೂರು ತಾಲೂಕು ವ್ಯಾಪ್ತಿಯಲ್ಲಿ 3.88ಎಕರೆ ಜಾಗವನ್ನು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಪ್ರಾಮಾಣಿಕರು. ಇವರಲ್ಲಿ ತುಂಬಾ ಮಂದಿಗೆ ನಿವೇಶನವಿಲ್ಲದಿರುವುದು ನಮ್ಮ ಗಮನಕ್ಕೆ ಬಂದಿದೆ. ಆದಷ್ಟು ಬೇಗದಲ್ಲೇ ಜಿಲ್ಲೆಯ ಪತ್ರಕರ್ತರಿಗೆ ನಿವೇಶನ ನೀಡಬೇಕೆಂದು ನಮ್ಮ ಅಭಿಲಾಷೆಯೂ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಮಾಧ್ಯಮ ಅಕಾಡೆಮಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷೃ ಆರ್. ರಾಮಕಷ್ಣ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು ಉಪಸ್ಥಿತರಿದ್ದರು.

ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಸುರೇಶ್ ಡಿ.ಪಳ್ಳಿ ಸ್ವಾಗತಿಸಿದರು. ಭಾಸ್ಕರ ರೆ ಕಟ್ಟ ಕಾರ್ಯಕ್ರಮ ನಿರ್ವಹಿಸಿದರು.

More from the blog

ಕಾಂಗ್ರೇಸ್ ಸರಕಾರದ ಆಡಳಿತದಲ್ಲಿ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ.ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಒಟ್ಟು 28 ಸ್ಥಾನದಲ್ಲಿದಲ್ಲಿ ಗೆಲುವು ಸಾಧಿಸುವುದು ನಿಶ್ವಿತ,ಇದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಅವರು ಬಿಸಿರೋಡಿನ ಗಾಣದಪಡ್ಪು ಬ್ರಹ್ಮ ಶ್ರೀ ನಾರಾಯಣ ಗುರು...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...