ಬಂಟ್ವಾಳ: ಭಾರತೀಯ ಜನತಾ ಪಾರ್ಟಿಯ ದ.ಕ.ಜಿಲ್ಲಾ ಕಾರ್ಯನಿರ್ವಹಣಾ ತಂಡದ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು.
ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್ ಪಕ್ಷದ ಸಂಘಟನಾತ್ಮಕ ಕಾರ್ಯಯೋಜನೆಗಳ ಕುರಿತು ಮಾಹಿತಿ ನೀಡಿದರು.
ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಡಾ| ಭರತ್ ಶೆಟ್ಟಿ, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಪ್ರಭಾರಿ ಭಾರತೀಶ್, ಜಿಲ್ಲಾ ಪದಾಧಿಕಾರಿಗಳು, ಮಂಡಲ ಪ್ರಮುಖರು ಪಾಲ್ಗೊಂಡಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ ಅವರು ಮಂಡಲಗಳ ವರದಿ ಸ್ವೀಕರಿಸಿದರು. ಕಸ್ತೂರಿ ಪಂಜ ಸ್ವಾಗತಿಸಿದರು. ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ನಿರ್ವಹಿಸಿದರು.