Wednesday, April 10, 2024

ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೊಳ್ನಾಡು ಜಿಲ್ಲಾ ಪಂಚಾಯತ್ ಒಳಪಟ್ಟ ಮಂಚಿ, ಸಾಲೆತ್ತೂರು, ಕೊಳ್ನಾಡು, ಕನ್ಯಾನ, ಕರೋಪಾಡಿ ಈ 5 ಗ್ರಾಮ ಪಂಚಾಯತಿನ ಸದಸ್ಯರು ವಲಯ ಕಾಂಗ್ರೆಸ್ ಅಧ್ಯಕ್ಷರು , ಬೂತ್ ಸಮಿತಿ ಅಧ್ಯಕ್ಷರು , ಬೂತ್ ಸಮಿತಿ ಕಾರ್ಯದರ್ಶಿ , ಬೂತ್ ಸಮಿತಿ ಬಿ ಎಲ್ ಎ , ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು , ಗ್ರಾಮ ಪಂಚಾಯತ್ ಸದಸ್ಯರು ,ಮುಖ್ಯ ಕಾರ್ಯಕರ್ತರ ಚುನಾವಣಾ ಪೂರ್ವ ತಯಾರಿ ಸಭೆಯು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವರಾದ ಬಿ ರಮಾನಾಥ ರೈಯವರ ನೇತೃತ್ವದಲ್ಲಿ ನಡೆಯಿತು .

ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿದರೆ ಗೆಲುವು ಶತಸಿದ್ದ ಎಂದು ಈ ಸಂದರ್ಭದಲ್ಲಿ ಹೇಳಿದರು . ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರು ಪಕ್ಷವನ್ನು ಕಟ್ಟಿ ಬೆಳೆಸೋಣ ಎಂದು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಹಾಯ ಹಸ್ತದ ಉಸ್ತುವಾರಿಯಾದ ಶ್ರೀಮತಿ ಅನಿತಾ ಹೇಮನಾಥ್ ಶೆಟ್ಟಿ,ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಎಂ ಎಸ್ ಮೊಹಮ್ಮದ್,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಶಬೀರ್ ಸಿದ್ದಕಟ್ಟೆ,ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ ಮುಂಚೂಣಿ ಘಟದ ಅಧ್ಯಕ್ಷರಾದ ಇಬ್ರಾಹಿಂ ನವಾಝ್,ಸೋಮಶೇಖರ್ ಗೌಡ, ಹರ್ಷದ್ ಬೂತ್ ಅಧ್ಯಕ್ಷರು ವಲಯ ಅಧ್ಯಕ್ಷರು ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರುಗಳು ಮತ್ತು ಪಕ್ಷದ ಪ್ರಮುಖರು ಸಭೆಯಲ್ಲಿ ಭಾಗವಹಿಸಿದರು.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...