Friday, October 27, 2023

ಇಂಧನ ಇಲಾಖೆಗೆ ಹೊಸತನ : ಸುನಿಲ್ ಕುಮಾರ್

Must read

ಬಂಟ್ವಾಳ : ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಹೊಸತನವನ್ನು ತರುವ ಮೂಲಕ ರಾಜ್ಯದ ಜನತೆಗೆ ಒಳಿತನ್ನು ಮಾಡುತ್ತೇನೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.

ಪೊಳಲಿ ರಾಜರಾಜೇಶ್ವರಿ ಕ್ಷೇತ್ರ ಕ್ಕೆ ಸೋಮವಾರ ಬೆಳಿಗ್ಗೆ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ಶುಕ್ರವಾರ ತಾನು ಸಚಿವನಾಗಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ಪೂರ್ವಭಾವಿಯಾಗಿ ರಾಜರಾಜೇಶ್ವರಿ ಭಕ್ತನಾದ ತಾನು ಇಂದು ಕ್ಷೇತ್ರಕ್ಕೆ ಭೇಟಿನೀಡಿ ಆಶೀರ್ವಾದ ಪಡೆದಿದ್ದೇನೆ. ಎಲ್ಲರ ಒಳಿತಿಗಾಗಿ ಕೆಲಸ ಮಾಡುತ್ತೇನೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು , ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಳದ ಕಾರ್ಯನಿರ್ವಣಾಧಿಕಾರಿ ಪಿ.ಜಯಮ್ಮ,ಆಡಳಿತ ಮೊಕ್ತೇಸರ ಡಾ| ಮಂಜಯ್ಯ ಶೆಟ್ಟಿ ಅಮ್ಮುಂಜೆ ಗುತ್ತು, ಯು.ತಾರನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಪಿ.ಮಾದವ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಗಿರಿಪ್ರಕಾಶ್ ತಂತ್ರಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಮುಖರಾದ ವೆಂಕಟೇಶ ನಾವುಡ, ಯಶವಂತ ಫೊಳಲಿ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ, ಪುಷ್ಪರಾಜ್ ಚೌಟ ಮತ್ತಿತರರು ಉಪಸ್ಥಿತರಿದ್ದರು.

More articles

Latest article