ಬಂಟ್ವಾಳ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಿ.ಸಿ.ರೋಡ್ ತಲಪಾಡಿಯಲ್ಲಿ ಇದೀಗ ನಡೆದಿದೆ.
ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು ತಿಳಿದುಬಂದಿದ್ದು, ಹೆಸರು ತಿಳಿದುಬಂದಿಲ್ಲ.
ಬೈಕ್ ಸವಾರರಿಬ್ಬರು ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳಿದ್ದು, ತಲಪಾಡಿ ಎಂಬಲ್ಲಿ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದು, ಈ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.