ಬಂಟ್ವಾಳ: ಜಿಲ್ಲೆಯಲ್ಲಿ ನಾಗಾರಾಧನೆಗೆ ಹೆಚ್ಚಿನ ಮಹತ್ವ ನೀಡುತ್ತಿದ್ದು, ಕೋವಿಡ್ ಸಂಕಷ್ಟದ ನಡುವೆಯೂ 17ವರ್ಷಗಳ ಬಳಿಕ ಬ್ರಹ್ಮಕಲಶೋತ್ಸವಕ್ಕೆ ಸಜ್ಜಾಗಿರುವ ಶ್ರೀ ಕ್ಷೇತ್ರ ಬದನಡಿಗೆ ಭಕ್ತರು ಮತ್ತು ಸರ್ಕಾರದ ನೆರವು ಅಗತ್ಯವಿದೆ ಎಂದು ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ ಹೇಳಿದ್ದಾರೆ.
ಇಲ್ಲಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಭಾನುವಾರ ಸಂಜೆ ನಡೆದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಕ್ಷೇತ್ರದ ತಂತ್ರಿ ಶ್ರೀಪಾದ ಪಾಂಗಣ್ಣಾಯ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ಸಮಿತಿ ಸದಸ್ಯರಾದ ರಾಜೇಶ ಗೋವಿಂದಬೆಟ್ಟು , ಆನಂದ ಬುರಾಲು, ಶರತ್ ಕುಮಾರ್ ಕೊಯಿಲ, ಯಮುನಾ ಪೂಜಾರಿ, ಪ್ರಧಾನ ಅರ್ಚಕ ಸುಂದರ ಹೊಳ್ಳ ಮತ್ತಿತರರು ಇದ್ದರು.
ಇದೇ ವೇಳೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ಆಯ್ಕೆಗೊಂಡರು.
ಡೊಂಬಯ ಅರಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ದಿನೇಶ ಸುವರ್ಣ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.