Tuesday, April 9, 2024

*ಬಂಟ್ವಾಳ ಸಂಚಾರಿ ಐಸಿಯು ಬಸ್ 39 ಗ್ರಾ.ಪಂ.ಗಳಲ್ಲಿ ಸಂಚಾರ.* 

ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರ ಕನಸಿನ ಯೋಜನೆಯಾದ ರಾಜ್ಯದಲ್ಲೇ ಸಂಚಲನ ಮೂಡಿಸಿದ ಕೆಎಸ್‌ಆರ್‌ಟಿಸಿ ಸಂಸ್ಥೆ ವಿನ್ಯಾಸಗೊಳಿಸಿದ ‘ ಸಾರಿಗೆ ಸುರಕ್ಷಾ-ಐಸಿಯು ಬಸ್’ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 39 ಗ್ರಾ.ಪಂ‌.ಗೆ ಬೇಟಿ ಪೂರ್ಣಗೊಳಿಸಿ, ಆರೋಗ್ಯ ತಪಾಸಣೆ ನಡೆಸುವಲ್ಲಿ ಯಶಸ್ವಿಯಾಗಿದೆ.

ಬಂಟ್ವಾಳ ತಾಲೂಕಿನ ಪ್ರತಿ ಗ್ರಾ.ಪಂ ಗೂ ತೆರಳಿದ ಐಸಿಯು ಬಸ್ ನಲ್ಲಿ ಒಟ್ಟು 2862 ಜನರ ಆರೋಗ್ಯ ತಪಾಸಣೆ ನಡೆಸಿ ಯಶಸ್ವಿ ಯಾಗಿದೆ.

ಸಾರಿಗೆ ಐಸಿಯು ಬಸ್ ಗೆ ಗ್ರಾ.ಪಂ.ವ್ಯಾಪ್ತಿಯ ಲ್ಲಿ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು ಸೆ.15 ರಿಂದ ಬುಧವಾರದಿಂದ ದ್ವೀತಿಯ ಸುತ್ತು ಪ್ರತಿ ಗ್ರಾಮಗಳಿಗೂ ಬೇಟಿ ನೀಡಿ ಆರೋಗ್ಯ ತಪಾಸಣೆ ಕಾರ್ಯಕ್ರಮ ಹಾಕಿಕೊಂಡಿದ್ದು ಸಾರ್ವಜನಿಕರು ಇದರ ಪ್ರಯೋಜನ ಪಡೆಯಲು ಅವರು ತಿಳಿಸಿದ್ದಾರೆ.

ಕ್ಷೇತ್ರದ ಜನರ ಆರೋಗ್ಯ ಕಾಪಾಡುವ ಬಂಟ್ವಾಳ ಶಾಸಕರ ವಿಶೇಷ ಆರೋಗ್ಯ ಕಾಳಜಿಯ ರಾಜ್ಯದಲ್ಲಿ ಸುದ್ದಿಯಾದ ಸರಕಾರಿ ಸಾರಿಗೆ ಸುರಕ್ಷಾ ಐಸಿಯು ಬಸ್ ಗೆ

ಜುಲೈ 13 ರಂದು ಶ್ರೀಕ್ಷೇತ್ರ ಪೊಳಲಿ ಅವರಣದಲ್ಲಿ ಚಾಲನೆ ನೀಡಲಾಗಿತ್ತು.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ ಅವರ ಉಪಸ್ಥಿತಿಯಲ್ಲಿ ಚಾಲನೆ ದೊರಕಿತ್ತು.

ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ,ದ.ಕ.ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಅವರು ಕೂಡ ಉಪಸ್ಥಿತರಿದ್ದರು.

ಜುಲೈ 19 ರಂದು ಸಂಗಬೆಟ್ಟು ಗ್ರಾ.ಪಂ.ಬೇಟಿ ಮಾಡುವ ಮೂಲಕ ಐಸಿಯು ಬಸ್ ನಲ್ಲಿ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಚಾಲನೆ ನೀಡಲಾಗಿತ್ತು.

ಸಂಗಬೆಟ್ಟು ಗ್ರಾಮಪಂಚಾಯತ್ ನಲ್ಲಿ ಆರೋಗ್ಯ ತಪಾಸಣೆ ಗೆ ಚಾಲನೆ ಸಿಕ್ಕಿದ ಬಳಿಕ ಶನಿವಾರ ಆದಿತ್ಯ ವಾರ ರಜಾದಿನ ಬಿಟ್ಟು ಉಳಿದ ಎಲ್ಲಾ ದಿನಗಳಲ್ಲಿ ಪ್ರತಿ ಗ್ರಾ.ಪಂ.ಗೂ ಐ.ಸಿ.ಯು ಬಸ್ ತೆರಳಿ ಗ್ರಾಮದ ಸಾರ್ವಜನಿಕರ ಆರೋಗ್ಯ ತಪಾಸಣೆ ನಡೆಸಿದೆ .

ಸಾರ್ವಜನಿಕ ವಲಯದಲ್ಲಿ ಈ ಯೋಜನೆಯ ಬಗ್ಗೆ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರಾಜ್ಯದಲ್ಲೆ ಮೊದಲಿಗೆ ಎಂಬಂತೆ ಮಂಗಳೂರು ಮತ್ತು ಪುತ್ತೂರು ಕೆಎಸ್‌ಆರ್‌ಟಿಸಿ ವಿಭಾಗ ವ್ಯಾಪ್ತಿಯ ಬಂಟ್ವಾಳ ಕ್ಷೇತ್ರಕ್ಕೆ ಬಂದಿರುವ ಏಕೈಕ ಬಸ್ ಇದಾಗಿದೆ.    ‌

*ಬಸ್ಸಿನೊಳಗೆ ಏನೇನಿದೆ* : ಸಾರಿಗೆ ಸುರಕ್ಷಾ-ಐಸಿಯು ಬಸ್ ನೊಳಗೆ ಏನೇನಿದೆ ಎಂಬುದನ್ನು ನೋಡುವುದಾದರೆ

ಆಂಬ್ಯುಲೆನ್ಸ್ ರೀತಿಯಲ್ಲೇ ಬಸ್ಸಿಗೆ ಸೈರನ್ ಅಳವಡಿಸಲಾಗಿದ್ದು, ಒಳಗೆ ಮಿನಿ ಕ್ಲಿನಿಕ್‌ ಮಾದರಿಯಲ್ಲಿ ಐದು ಬೆಡ್, ಪ್ರತಿ ಬೆಡ್‌ ಗೂ ಆಕ್ಸಿಜನ್ ವ್ಯವಸ್ಥೆ, ರೋಗಿಗಳ ರಕ್ತದೊತ್ತಡ, ಆಕ್ಸಿಜನ್ ಪ್ರಮಾಣ, ಇಸಿಜಿ, ತಾಪಮಾನ ಪರೀಕ್ಷೆಗೆ ಮಾನಿಟರ್ ವ್ಯವಸ್ಥೆ ಇದೆ. ವೆಂಟಿಲೇಟರ್ ಅಳವಡಿಸುವ ಸೌಲಭ್ಯ, ತುರ್ತು ಔಷಧಿ ಸಹಿತ ಜನರೇಟರ್ ವ್ಯವಸ್ಥೆಯೂ ಇದೆ. ನೋಟಿಸ್ ಬೋರ್ಡ್, ವಿಶೇಷ ಬರಹಗಳು ಕೂಡ ಇದೆ.  ಪ್ರತಿ ಎರಡು ತಿಂಗಳಿಗೊಮ್ಮೆ ಗ್ರಾಮಗಳಿಗೆ ತೆರಳಿ ಸಂಚಾರಿ ಆಸ್ಪತ್ರೆ ರೀತಿಯಲ್ಲಿ ಕಾರ್ಯನಿರ್ವಹಿಸಲಿದ್ದು, ತಜ್ಞ ವೈದ್ಯರು ಮತ್ತು ಆರೋಗ್ಯ ಸಹಾಯಕರು ಇರುತ್ತಾರೆ.

   *ಇಸಿಜಿ ಸೌಲಭ್ಯ* 

ಐಸಿಯು ಬಸ್ ನಲ್ಲಿ ಇಸಿಜಿ ಸೌಲಭ್ಯ ಲಭ್ಯವಿದ್ದು ಗ್ರಾಮೀಣ ಭಾಗದ ಜನರಿಗೆ ಬಹಳಷ್ಟು ಉಪಯೋಗವಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಎರಡನೇ ಹಂತದ ಸಂಚಾರಿ ಐಸಿಯು ಬಸ್ ಸೆ.15 ರಂದು ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರ್ಪೆ ಗ್ರಾಮದ ಸಮಾಜ ಮಂದಿರದ ಬಳಿಯಲ್ಲಿ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಿರುತ್ತದೆ.

ಆ ಬಳಿಕ ಪ್ರತಿ ದಿನ ಶನಿವಾರ ಆದಿತ್ಯವಾರ ರಜಾದಿನ ಬಿಟ್ಟು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ತೆರಳಿ ಸಾರ್ವಜನಿಕ ಆರೋಗ್ಯ ತಪಾಸಣೆಗೆ ಲಭ್ಯವಾಗಿರುತ್ತದೆ.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...