Tuesday, April 16, 2024

ನಕಲಿ ಪೇಸ್ ಬುಕ್ ಮೂಲಕ ಮಹಿಳೆಗೆ ಲೈಂಗಿಕ ಕಿರುಕುಳ : ಆರೋಪಿ ಬಂಧನ

ಬಂಟ್ವಾಳ: ನಕಲಿ ಖಾತೆ ತೆರೆದು ಮಹಿಳೆಯರಿಗೆ ಲೈಗಿಂಕ ಕಿರುಕುಳ ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ನೇತ್ರತ್ವದ ತಂಡ ಬಂಧಿಸಿದೆ.

ಬಜಪೆ ಗುರುಪುರ ನಿವಾಸಿ ರಿಕ್ಷಾ ಚಾಲಕ ಮಹಮ್ಮದ್ ಆಲಿ ಬಂಧಿತ ಆರೋಪಿ.

ಬಂಟ್ವಾಳ ತಾಲೂಕಿನ ಮಹಿಳೆಯೋರ್ವಳಿಗೆ ತಾನು ಅನಿಲ್ ಶೆಟ್ಟಿ ಬ್ಯುಸಿನೆಸ್ ಮ್ಯಾನ್ ಎಂದು ಪೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಬಳಿಕ ಲೈಂಗಿಕ ಕಿರುಕುಳ ಕೊಡುತ್ತಿದ್ದ.

ಈ ಬಗ್ಗೆ ನಗರ ಪೋಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೋಲೀಸರು ಆರೋಪಿ ಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮಹಮ್ಮದ್ ಆಲಿ ಎಂಬಾತ ಹಿಂದೂಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಿಂದೂ ಮಹಿಳೆಯರನ್ನು ಬಲೆಗೆ ಹಾಕುತ್ತಿದ್ದ ಎಂಬ ಆರೋಪಗಳು ಇವೆ.

ಇಂತಹ ಅನೇಕ ಮಹಿಳೆಯರಿಗೆ ಈತ ಕಿರುಕುಳ ನೀಡುತ್ತಿದ್ದ ಬಗ್ಗೆ ದೂರುಗಳು ಕೇಳಿ ಬಂದಿದ್ದು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯ ಗಳು ಕೇಳಿ ಬರುತ್ತಿದೆ.

ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದು ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ.

More from the blog

ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ : ಬಜರಂಗದಳ, ವಿ.ಹಿಂ.ಪರಿಷತ್ ಕಲ್ಲಡ್ಕ ಪ್ರಖಂಡದಿಂದ ಖಂಡನೆ

ಬಂಟ್ವಾಳ: ಅಪಘಾತ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ನಡೆಸಿದ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ...

ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ

ವಿಟ್ಲ - ಪುಣಚ ವಲಯ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆ ನೀರುಮಜಲು ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿ ಕಳೆದ...

ಕೆನರಾ ರೊಬೆಕೋ ಸಂಸ್ಥೆಯಿಂದ ಕೊಯಿಲ ಶಾಲಾ ವಿದ್ಯಾರ್ಥಿಗಳಿಗೆ ಬೈಸಿಕಲ್ ಕೊಡುಗೆ

ಬಂಟ್ವಾಳ: ತಾಲೂಕಿನ ಕೊಯಿಲ ಸರ್ಕಾರಿ ಪ್ರೌಢಶಾಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಕೆನರಾ ರೊಬೆಕೋ ಸಂಸ್ಥೆಯ ವತಿಯಿಂದ 45 ಬೈಸಿಕಲ್ ಗಳನ್ನು ವಿತರಿಸಲಾಯಿತು. ಕೆನರಾ ರೊಬೆಕೋ ಸಂಸ್ಥೆಯ ಮಂಗಳೂರು ವಿಭಾಗದ ವ್ಯವಸ್ಥಾಪಕರಾದ ಮುರಳೀಧರ ಶೆಣೈ, ಅಧಿಕಾರಿ ರಾಜೇಶ್...

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...