Sunday, October 22, 2023

ಸೋಶಿಯಲ್ ಮೀಡಿಯಾ ಈಸ್ ಪವರ್ ಫುಲ್‌ ವೆಪನ್ ಆ್ಯಂಡ್ ಡೇಂಜರಸ್ ವೆಪನ್: ರಾಜೇಶ್ ಕೆ.ವಿ.

Must read

ವಾಮದಪದವು ಸ.ಪ್ರ.ದ.ಕಾಲೇಜು,
ಕಾರ್ಯ ನಿರತ ಪತ್ರಕರ್ತರ ಸಂಘ ಬಂಟ್ವಾಳ ವತಿಯಿಂದ ಮಾಹಿತಿ ಕಾರ್ಯಾಗಾರ

ಸೋಶಿಯಲ್ ಮೀಡಿಯಾ ಈಸ್ ಪವರ್ ಫುಲ್‌ ವೆಪನ್ ಆ್ಯಂಡ್ ಡೇಂಜರಸ್ ವೆಪನ್

ಸಾಮಾಜಿಕ ಜಾಲತಾಣದ ಒಳಿತು ಕೆಡುಕಿನ ಅರಿವಿರಲಿ: ರಾಜೇಶ್ ಕೆ.ವಿ.


ಬಂಟ್ವಾಳ: ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಸಾಮಾಜಿಕ ಜಾಲತಾಣ ಎಷ್ಟು ಅವಶ್ಯಕತೆ ಇದೆಯೋ ಅದಕ್ಕಿಂತ ಹೆಚ್ಚು ಅನನುಕೂಲವನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅಗತ್ಯಕ್ಕೆ ತಕ್ಕಂತೆ ಮಾತ್ರ ಬಳಸಿಕೊಳ್ಳುವಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ.ವಿ. ಅವರು ಕಿವಿಮಾತು ಹೇಳಿದರು.
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ, ಪ್ರೆಸ್ ಕ್ಲಬ್ ಬಿ.ಸಿ‌.ರೋಡ್ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ ಪ್ರಯುಕ್ತ ಶುಕ್ರವಾರ ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸಾಮಾಜಿಕ ಜಾಲತಾಣ- ಸಾಧಕ ಬಾಧಕಗಳು ಕುರಿತ
ಮಾಹಿತಿ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಉಪನ್ಯಾಸ ನೀಡಿದರು. ಅತಿಯಾಗಿ ಮೊಬೈಲ್ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಯಿಂದ ಎಚ್ಚರಿಕೆ ವಹಿಸಬೇಕೆಂದ ಅವರು ಇದು ಮಹಿಳಾ ದೌರ್ಜನ್ಯದಂತಹ ಪ್ರಕರಣಗಳಿಗೂ ಕಾರಣವಾಗುತ್ತದೆ ಎಂದರು.
ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಕಾರ್ಯಕ್ರಮ ಉದ್ಘಾಟಿಸಿದರು.
ಕಾಲೇಜು ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಬಿ.ಶೆಟ್ಟಿ ಅಧ್ಯಕ್ಷತೆ ವಹಿಸಿ ಸಾಮಾಜಿಕ ಜಾಲತಾಣದ ಸಾಧಕ ಮತ್ತು ಬಾಧಕಗಳ ಬಗ್ಗೆ ಅರಿತುಕೊಂಡು ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದರಲ್ಲದೆ ಈ ದೆಸೆಯಲ್ಲಿ ಬಂಟ್ವಾಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘ ಕಾರ್ಯಾಗಾರ ಆಯೋಜಿಸಿರುವುದು ಸ್ತುತ್ಯಾರ್ಹವಾಗಿದೆ ಎಂದರು.
ಎನ್ನೆಸೆಸ್ ನಿಂದ ವಿದ್ಯಾರ್ಥಿಗಳಲ್ಲಿ ಗ್ರಾಮಾಭಿವೃದ್ಧಿಯ ಅರಿವು ಉಂಟಾಗುವುದು. ಇದನ್ನು ಬಳಸಿಕೊಳ್ಳಬೇಕು ಎಂದರು.
ವೇದಿಕೆಯಲ್ಲಿ ಪತ್ರಕರ್ತರ ಸಂಘದ ಉಪಾಧ್ಯಕ್ಷ ಯಾದವ ಕುಲಾಲ್, ಕೋಶಾಧಿಕಾರಿ ವೆಂಕಟೇಶ್ ಬಂಟ್ವಾಳ ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯ ಬಹುಮಾನಗಳನ್ನು ವಿತರಿಸಲಾಯಿತು. ಸದಸ್ಯ ರತ್ನದೇವ್ ಪುಂಜಾಲಕಟ್ಟೆ ವಿಜೇತರ ವಿವರ ನೀಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ: ರೊನಾಲ್ಡ್ ಪ್ರವೀಣ್ ಕೊರೆಯ ವಂದಿಸಿದರು. ಈ ಸಂದರ್ಭ ರಾಷ್ಟ್ರೀಯ ಸೇವಾ ಯೋಜನೆಯ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ಶ್ವೇತಾಕ್ಷಿ ಕಾರ್ಯಕ್ರಮ ನಿರ್ವಹಿಸಿದರು.

More articles

Latest article