Tuesday, April 9, 2024

ಬೆಳ್ಳೂರು ದೇವಸ್ಥಾನದ ರಥಬೀದಿ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ

 

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥಬೀದಿಗೆ ೧.೭೫ ಕೋ.ರೂ.ವೆಚ್ಚದ ಕಾಂಕ್ರೀಟ್ ಕಾಮಗಾರಿಗೆ ಗುರುವಾರ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಶಿಲಾನ್ಯಾಸ ನೆರವೇರಿಸಿದರು.


ಬಳಿಕ ಮಾತನಾಡಿದ ಅವರು, ಧಾರ್ಮಿಕ- ಶೈಕ್ಷಣಿಕ ಸಂಸ್ಥೆಗಳ ಅಭಿವೃದ್ಧಿಯಿಂದ ಊರು ಅಭಿವೃದ್ಧಿಯಾಗುತ್ತದೆ ಎಂಬ ನೆಲೆಯಲ್ಲಿ ಸಂಪರ್ಕ ರಸ್ತೆಗಳನ್ನು ಪ್ರಥಮ ಆದ್ಯತೆಯ ನೆಲೆಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಜನರಿಗೆ ಕಷ್ಟದ ಸಂದರ್ಭದಲ್ಲಿ ನೆರವು ನೀಡುವ ಅವಕಾಶ ಸಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿಯವರ ದಕ್ಷ ಆಡಳಿತದಲ್ಲಿ ಭಾರತೀಯರೆಲ್ಲರೂ ಉಚಿತ ಲಸಿಕೆ ಪಡೆಯುವಂತಾಗಿದೆ. ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಶಕ್ತಿಯನ್ನು ದೇವರು ಕರುಣಿಸುವಂತೆ ಪ್ರಾರ್ಥಿಸುತ್ತೇನೆ ಎಂದರು.
ಗ್ರಾಮದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ ಕುಸಿದು ಹಾನಿಗೊಳಗಾದ ೨ ಕುಟುಂಬಗಳಿಗೆ ಶಾಸಕರು ಪರಿಹಾರ ಧನದ ಚೆಕ್ ವಿತರಿಸಿದರು.
ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ, ದೇವಸ್ಥಾನದ ರಥ ಸಾಗುವ ಹಾದಿಯ ಅಭಿವೃದ್ಧಿ ಹಲವು ವರ್ಷಗಳ ಬೇಡಿಕೆಯಾಗಿದ್ದು, ಪ್ರಸ್ತುತ ಅದು ಕಾಂಕ್ರೀಟ್ ಕಾಮಗಾರಿಯ ಮೂಲಕ ಈಡೇರುತ್ತಿದೆ. ಕಾವೇಶ್ವರನ ಅನುಗ್ರಹದಿಂದ ಶಾಸಕರ ಕಾಳಜಿಯಿಂದ ಅದು ಈಡೇರುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ ೭೫೦ ಕೋ.ರೂ.ಗಳ ಅಭಿವೃದ್ಧಿ ಕಾರ್ಯಗಳು ಅನುಷ್ಠಾನಗೊಂಡಿದ್ದು, ೮.೬೫ ಕೋ.ರೂ.ಗಳ ಅಭಿವೃದ್ಧಿ ಕಾರ್ಯಗಳು ಬಡಗಬೆಳ್ಳೂರು ಗ್ರಾ.ಪಂ.ವ್ಯಾಪ್ತಿಯಲ್ಲೇ ಅನುಷ್ಠಾನಗೊಂಡಿದೆ.
ಬಡಗಬೆಳ್ಳೂರು ಗ್ರಾ.ಪಂ.ಅಧ್ಯಕ್ಷ ಜಿ.ಪ್ರಕಾಶ್ ಆಳ್ವ, ಉಪಾಧ್ಯಕ್ಷೆ ಮಮತಾ, ಸದಸ್ಯರಾದ ವಿಜಯಾ, ಉಮೇಶ್ ಶೆಟ್ಟಿ, ಚೈತ್ರಾ, ಗೀತಾ, ರಘುವೀರ್ ಅಚಾರ್ಯ, ಚಂದ್ರಹಾಸ ಪೂಜಾರಿ, ಬುಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿವಾಕರ ನಾಯಕ್, ವೀಣಾ ಭಟ್, ಜಯರಾಮ್ ಶೆಟ್ಟಿ, ತಾ.ಪಂ.ಮಾಜಿ ಸದಸ್ಯ ಯಶವಂತ ಪೊಳಲಿ, ಬಡಗಬೆಳ್ಳೂರು ಸಿಎ ಬ್ಯಾಂಕ್ ಅಧ್ಯಕ್ಷ ನಂದರಾಮ ರೈ, ಗುತ್ತಿಗೆದಾರರಾದ ಸುಧಾಕರ ಶೆಟ್ಟಿ ಮುಗ್ರೋಡಿ, ಅನಿಲ್ ಶೆಟ್ಟಿ, ಕಾರ್ಯಪಾಲಕ ಎಂಜಿನಿಯರ್ ಪ್ರಭಾಕರ್ ಟಿ.ಎಂ, ಕಿರಿಯ ಎಂಜಿನಿಯರ್ ಪ್ರಸನ್ನ ರಾವ್, ದಾಮೋದರ್, ಪ್ರಮುಖರಾದ ಮಹಾಬಲ ಆಳ್ವ ಕಮ್ಮಾಜೆ, ತಿರುಲೇಶ್ ಬೆಳ್ಳೂರು, ಅಶ್ವಥ್ ರಾವ್, ರಮೇಶ್‌ ಪೂಜಾರಿ ಬಟ್ಟಾಜೆ, ಶಶಿಕಿರಣ್, ಕಿಶೋರ್ ಪಲ್ಲಿಪಾಡಿ, ಯಶನಂತ ನಾಯ್ಕ್ ನಗ್ರಿ ಮೊದಲಾದವರಿದ್ದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಎಲ್.ಶೆಟ್ಟಿ ಸ್ವಾಗತಿಸಿದರು. ಸಮಿತಿ ಸದಸ್ಯ ದಿವಾಕರ್ ನಾಯ್ಕ್ ವಂದಿಸಿದರು. ಪ್ರಕಾಶ್ ಬೆಳ್ಳೂರು ಕಾರ್ಯಕ್ರಮ ನಿರ್ವಹಿಸಿದರು.

More from the blog

ಮನೆಗೆ‌ ನುಗ್ಗಿ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸ್ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ...

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...