ಅಂತ್ಯೋದಯ ಮಾಹಿತಿ ಕಾರ್ಯಗಾರದಲ್ಲಿ ಪಾಲ್ಗೊಳ್ಳಲು ಗ್ರಾ. ಪಂಚಾಯತ್ ಸದಸ್ಯರಿಗೆ ಮನವಿ

ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳ ಕಷ್ಟ ಸುಖಗಳಿಗೆ ಹತ್ತಿರದಿಂದ ಸ್ಪಂದಿಸುವ ಮೂಲಕ ಸರಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರಿಗೆ ತಮ್ಮ ಸಾಮಾರ್ಥ್ಯ ಅಭಿವೃದ್ಧಿಯನ್ನು ಹೆಚ್ಚಿಸಿ ಕೊಳ್ಳುವ ದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ, ಪ. ಪಂಗಡ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಗಳ ಜಂಟಿ ಆಶ್ರಯದಲ್ಲಿ ಹಾಗೂ ದ. ಕ.ಜಿಲ್ಲಾಡಳಿತ ಸಹಯೋಗದೊಂದಿಗೆ ರಾಜ್ಯ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾರ್ಗದರ್ಶನದಲ್ಲಿ” ಅಂತ್ಯೋದಯ ಕಲ್ಪನೆ” ಸಾಕಾರ ಗೊಳ್ಳಲು ದ. ಕ. ಜಿಲ್ಲೆಯ ಎಲ್ಲಾ ಗ್ರಾ. ಪಂಚಾಯತ್ ಸದಸ್ಯರಿಗೆ, ನಗರ ಸ್ಥಳೀಯ ಸಂಸ್ಥೆಯ ಸದಸ್ಯರಿಗೆ ದಿನಾಂಕ 04-10-2021 ರಂದು ಸೋಮವಾರ ಬೆಳಿಗ್ಗೆ 9:00 ಕ್ಕೆ ಸರಿಯಾಗಿ ಬಂಟವಾಳದ ಬಂಟರ ಭವನದಲ್ಲಿ ಅಂತ್ಯೋದಯ ಕಾರ್ಯಾಗಾರ ಜರಗಲಿರುವುದು.

ಅಂತ್ಯೋದಯ ಕಾರ್ಯಕ್ರಮವನ್ನು ಕೇಂದ್ರ ಸಚಿವರಾದ ನಾರಾಯಣ ಸ್ವಾಮಿ ಉದ್ಘಾಟಿಸಲಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಅಧ್ಯಕ್ಷತೆ ವಹಿಸಲಿರುವರು.

ಪ. ಪಂಗಡ ಕಲ್ಯಾಣ ಸಚಿವರು ಶ್ರೀರಾಮುಲು, ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲ್, ಸೇರಿದಂತೆ ಜಿಲ್ಲೆಯ ಶಾಸಕರು, ರಾಜ್ಯ ಮಟ್ಟದ, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿರುವರು.

ಕಾರ್ಯಕ್ರಮ ಯಶಸ್ವಿಯಾಗುವರೇ… ಸ್ಥಳೀಯ ಜನಪ್ರತಿನಿಧಿಗಳ ಪಾಲ್ಗೊಳ್ಳುವಿಕೆ ಅಗತ್ಯವಾಗಿದ್ದು, ಎಲ್ಲಾ ಗ್ರಾ. ಪಂಚಾಯತ್ ಸದಸ್ಯರು, ನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸುವಂತೆ ಮಾಜಿ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here