Tuesday, April 9, 2024

ಕ್ಷಯರೋಗ ನಿಯಂತ್ರಣ ಕಾರ್ಯಪಡೆ ಸಭೆ

ವಿಟ್ಲ : ಮಾಣಿಲ ಗ್ರಾಮಪಂಚಾಯತ್ ಸಭಾಂಗಣದಲ್ಲಿ ” ಕ್ಷಯರೋಗ ನಿಯಂತ್ರಣ ಕಾರ್ಯಪಡೆ ” ಸಭೆ ನಡೆಯಿತು.

ದ.ಕ.ಜಿಲ್ಲಾ ಕ್ಷಯರೋಗನಿಯಂತ್ರಣಾಧಿಕಾರಿಗಳು ಸವಿಸ್ತಾರ ಮಾಹಿತಿ ನೀಡಿದರು. 2025ರೊಳಗೆ ಕ್ಷಯಮುಕ್ತಭಾರತದ ಅಂಗವಾಗಿ ಕ್ಷಯಮುಕ್ತ ಮಾಣಿಲ ಗ್ರಾಮವನ್ನು ಸಾಧಿಸುವ ಕುರಿತು ಸಕ್ರಿಯವಾಗಲು ಸಲಹೆ ನೀಡಿದರು. ಇತರ ಕ್ಷಯರೋಗ ನಿರ್ಮೂಲನ ಸಿಬ್ಬಂದಿಗಳೂ ಪಂಚಾಯತ್ ನ ಸಹಭಾಗಿತ್ವದ ಕುರಿತು ಮಾತಾಡಿದರು.


ಈ ಸಂದರ್ಭದಲ್ಲಿ ಗ್ರಾಮ ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಪಿಡಿಓ, ಅಂಗನವಾಡಿ ಹಾಗೂ ಆಶಾಕಾರ್ಯಕರ್ತೆಯರು, ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ ಸದಸ್ಯರು, ಜಿಲ್ಲಾ ಮಟ್ಟದ ಕ್ಷಯನಿಯಂತ್ರಣಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಛೇರಿಯ ಸಿಬ್ಬಂದಿಗಳು, ಆರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಪೆರುವಾಯಿ ವೈದ್ಯಾಧಿಕಾರಿಯವರು ಸ್ವಾಗತಿಸಿ, ಪ್ರಾಸ್ತಾವಿಕ ಮಾತನ್ನಾಡಿದರು. ಕೊನೆಗೆ ಧನ್ಯವಾದಗಳೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...