Saturday, October 21, 2023

“ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

Must read

ಬಂಟ್ವಾಳ: ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ “ತುಳುನಾಡ ಲೇಸ್” ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಬಂಟ್ವಾಳ ವಾಮದಪದವು ಗಣೇಶ ಮಂದಿರದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಮ್ಮ ಕುಡ್ಲ ವಾಹಿನಿ ವಾರ್ತಾ ವಾಚಕಿ ಡಾ. ಪ್ರಿಯಾ ಹರೀಶ್ ನೆರವೇರಿಸಿದರು. ಯೋಗೀಶ್ ಶೆಟ್ಟಿ ಕಳಸಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರಾದ ಮುರಳಿ ಕೃಷ್ಣ ರಾವ್ , ಗಾಯಕಿ ಕ್ಷಿತಿ. ಕೆ ರೈ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿ ರಾಜ್ಯ ರಾಜ್ಯ ನಗರ ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಮಂಡಳಿ ನಿರ್ದೇಶಕರಾದ ಸುಲೋಚನಾ ಜಿ. ಕೆ ಭಟ್, ಚೆನ್ನೈತೋಡಿ ಗ್ರಾ ಪಂ. ಅಧ್ಯಕ್ಷರಾದ ಭಾರತಿ ರಾಜೇಂದ್ರ ಪೂಜಾರಿ, ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಆನ್ಲೈನ್ ಸ್ಪರ್ಧೆಯಲ್ಲಿ ಆಯ್ಕೆಯಾದ ಟಾಪ್ 10 ಸ್ಪರ್ದಿಗಳ ತುಳುನಾಡ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.
ಸಮಾರೋಪ ಸಮಾರಂಭದಲ್ಲಿ ತುಳುನಾಡ ರಕ್ಷಣಾ ವೇದಿಕೆಯ ಸ್ಥಾಪಕಧ್ಯಕ್ಷರಾದ ಯೋಗೀಶ್ ಶೆಟ್ಟಿ ಜೆಪ್ಪು ಅಧ್ಯಕ್ಷತೆ ವಹಿಸಿದ್ದರು. ತುಳು ಸಂಸ್ಕೃತಿ ಆಚಾರ ವಿಚಾರದ ಬಗ್ಗೆ, ಆಟಿ ವಿಶೇಷತೆಯ ಬಗ್ಗೆ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಕತ್ತಲ್ ಸರ್ ಮಾತನಾಡಿದರು. ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಂ. ತುಂಗಪ್ಪ ಬಂಗೇರ, ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಆನ್ಲೈನ್ ಸ್ಪರ್ಧೆಯಲ್ಲಿ ಆಯ್ಕೆಯಾದ ಟಾಪ್ ಟೆನ್ ಸ್ಪರ್ದಿಗಳನ್ನು ಅಭಿನಂದಿಸಿ ವಿಜೇತರಾದ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು.

ಕೋವಿಡ್ ಸಂಕಷ್ಟ ಕಾಲದಲ್ಲಿ ಶ್ರಮವಹಿಸಿ ಕೊರೋನ ನಿಯಂತ್ರಣದಲ್ಲಿ ಹೋರಾಡಿದ ಆಶಾಕಾರ್ಯಕರ್ತರನ್ನು ಗೌರವಿಸಲಾಯಿತು.

More articles

Latest article