Tuesday, October 17, 2023

ಪುನೀತ್​ ರಾಜ್​ಕುಮಾರ್​ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

Must read

ಸ್ಯಾಂಡಲ್​ವುಡ್​ ನಟ ಪುನೀತ್​ ರಾಜ್​ಕುಮಾರ್​ ಅವರಿಗೆ ಲಘು ಹೃದಯಾಘಾತವಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು ಜಮಾಯಿಸುತ್ತಿದ್ದು, ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದೆ.
ಶಿವರಾಜ್​ಕುಮಾರ್​ ಅವರ ಬಹುನಿರೀಕ್ಷಿತ ಸಿನಿಮಾ ‘ಭಜರಂಗಿ’ ಇಂದು ಅದ್ದೂರಿಯಾಗಿ ತೆರೆಕಂಡಿದ್ದು, ಅಣ್ಣನ ಸಿನಿಮಾವನ್ನ ಕಣ್ತುಂಬಿಕೊಳ್ಳಲೆಂದು ಥಿಯೇಟರ್​ಗೆ ಹೋಗಲು ಪುನೀತ್ ಪ್ಲಾನ್​ ಮಾಡಿದ್ದರಂತೆ. ಅಷ್ಟರಲ್ಲಿ ಹೃದಯಾಘಾತ ಸಂಭವಿಸಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆ ಮೂಲಗಳ ಪ್ರಕಾರ ನಟ ಅಪ್ಪು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಆಸ್ಪತ್ರೆಗೆ ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಬಂದಿದ್ದಾರೆ. ಪುನೀತ್​ ಅವರ ಮನೆ ಬಳಿ ಪೊಲೀಸ್​ ಬಂದೋಬಸ್ತ್​ ವ್ಯವಸ್ಥೆ ಮಾಡಲಾಗಿದೆ.ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ಅಪ್ಪು ವರ್ಕ್​ಔಟ್​ ಮಾಡುತ್ತಿದ್ದರು. ಆ ವೇಳೆ ಕುಸಿದು ಬಿದ್ದ ಅಪ್ಪು ಅವರನ್ನ ಕೂಡಲೇ ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

More articles

Latest article