Friday, October 27, 2023

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ಕೊಠಡಿಗಳ ಉದ್ಘಾಟಣೆ

Must read

ಬಂಟ್ವಾಳ: ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ರೂ.31.80 ಲಕ್ಷ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ಕೊಠಡಿಗಳನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಶಿಕ್ಷಕರು ಹಾಗೂ ಎಸ್‌ಡಿಎಂಸಿ ಸಮಿತಿಯಲ್ಲಿ ಹೊಂದಾಣಿಕೆಯಿದ್ದಾಗ ಶಾಲೆಯ ಅಭಿವೃದ್ಧಿ ಸಾಧ್ಯವಿದ್ದು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳಕ್ಕೂ ಶ್ರಮಿಸಬೇಕಿದೆ. ಬಂಟ್ವಾಳ ಕ್ಷೇತ್ರದಲ್ಲಿ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಪಂಜಿಕಲ್ಲು ಪಂಚಾಯತ್ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಂ.ಪಿ, ಕಿರಿಯ ಎಂಜಿನಿಯರ್ ಅಜಿತ್ ಕೆ.ಎನ್, ತಾ.ಪಂ.ಮಾಜಿ ಸದಸ್ಯೆ ಪದ್ಮಾವತಿ, ಗ್ರಾ.ಪಂ.ಉಪಾಧ್ಯಕ್ಷೆ ಜಯಶ್ರೀ, ಪಿಡಿಒ ವಿದ್ಯಾ, ಸದಸ್ಯರಾದ ಲಕ್ಷ್ಮೀನಾರಾಯಣ ಗೌಡ, ಮೋಹನ್‌ದಾಸ್, ಬಾಲಕೃಷ್ಣ, ವಿಕೇಶ್, ನಳಿನಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ನಿವೃತ್ತ ಶಿಕ್ಷಕ ಸೋಮಪ್ಪ ಮಾಸ್ಟರ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಪೂರ್ಣಿಮಾ, ಶಿಕ್ಷಣ ಸಂಯೋಜಕಿ ಸುಜಾತಾ ಉಪಸ್ಥಿತರಿದ್ದರು.

ಗುತ್ತಿಗೆದಾರ ಮೊಹಮ್ಮದ್ ಇಕ್ಬಾಲ್ ಅವರನ್ನು ಸಮ್ಮಾನಿಸಲಾಯಿತು. ಮುಖ್ಯಶಿಕ್ಷಕಿ ಮರ್ಸಿನ್ ಮೇಥಿ ಪಾಯ್ಸ್ ವರದಿ ವಾಚಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಾಜೇಶ್ ಗೌಡ ಸ್ವಾಗತಿಸಿದರು. ಶಿಕ್ಷಕಿ ಐರಿನ್ ಮಿರಾಂದ ವಂದಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ರಾಮ್‌ಕುಮಾರ್ ಮಾರ್ನಾಡ್ ಕಾರ್ಯಕ್ರಮ ನಿರ್ವಹಿಸಿದರು.

More articles

Latest article