Friday, April 5, 2024

ತುಂಬೆ ವೆಂಟೆಡ್ ಡ್ಯಾಂ ನ ಕೆಳಭಾಗದಲ್ಲಿ ಕೃಷಿ ಭೂಮಿ ನೀರು ಪಾಲು: ಸಂತ್ರಸ್ತರಿಗೆ ಪರಿಹಾರ ನೀಡಲು ತುಂಬೆ ಗ್ರಾ.ಪಂ.ಒತ್ತಾಯ

ಬಂಟ್ವಾಳ: ತುಂಬೆ ಹೊಸ ವೆಂಟೆಡ್ ನ ಕೆಳ ಭಾಗದ ನದಿ ತೀರದ ಇಕ್ಕೆಲಗಳಲ್ಲಿರುವ ಕೃಷಿ ಹಾಗೂ ಕೃಷಿ ಭೂಮಿ ನೀರು ಪಾಲಾಗಿ ರೈತರಿಗೆ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.

ತುಂಬೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಂಗಳೂರು ಮಹಾನಗರ ಪಾಲಿಕೆ ಗೆ ನೀರು ಸರಬರಾಜು ಮಾಡುವ ತುಂಬೆ ವೆಂಟೆಡ್ ಡ್ಯಾಂ ನಿಂದ ಹೊರಕ್ಕೆ ಚೆಲ್ಲುವ ನೀರಿನ ರಭಸಕ್ಕೆ ಕೆಳಭಾಗದಲ್ಲಿ ನೇತ್ರಾವತಿ ನದಿ ತೀರದ ಎರಡು ಬದಿಯ ಕೃಷಿ ಭೂಮಿಗಳು ಕೊರತೆಯಿಂದ ನದಿ ಪಾಲಾಗಿವೆ.

ಸುಮಾರು ಎಂಟು ಕುಟುಂಬಗಳ ಅಂದಾಜು 50 ಸೆಂಟ್ಸ್ ಜಮೀನು ನೀರಿನ ರಭಸಕ್ಕೆ ಕೊರೆದು ಜರಿದು ಬಿದ್ದಿದೆ .

ಈ ಭಾಗದಲ್ಲಿ ಎಂಟು ಕುಟುಂಬ ನೂರಾರು ಅಡಿಕೆ ಕೃಷಿ, ತೆಂಗು ಬಾಳೆ ಕೃಷಿಗಳು ನದಿ ಪಾಲಾಗಿದೆ.

ಕೃಷಿ ಭೂಮಿ ನಷ್ಟ ಉಂಟಾಗಿರುವ ಬಗ್ಗೆ ಭೂ ಮಾಲೀಕರು ಈಗಾಗಲೇ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಗೆ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬೊಳ್ಳಾರಿ ಮಾಜಿ ಅಧ್ಯಕ್ಷ ಮಹಮ್ಮದ್ ವಳವೂರು ಹಾಗೂ ಪಂಚಾಯತ್ ಪಿ.ಡಿ.ಒ ಬೇಟಿ ನೀಡಿ ಫಲಾನುಭವಿಗಳಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

*ಅವೈಜ್ಞಾನಿಕ ಕಾಮಗಾರಿ ತುಂಬೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಬೊಳ್ಳಾರಿ* 

ತುಂಬೆ ವೆಂಟೆಡ್ ಡ್ಯಾಂ ನ ಅವೈಜ್ಞಾನಿಕ ವಿಧಾನ ದ ಕಾಮಗಾರಿ ಯ ಪರಿಣಾಮ ವಾಗಿ ಇಂದು ಡ್ಯಾಂ ನ ಕೆಳಭಾಗದಲ್ಲಿ ನದಿ ತೀರದ ಎರಡು ಬದಿಯ ಕೃಷಿ ಭೂಮಿಗಳು ನೀರಿನ ಕೊರತೆಕ್ಕೊಲಗಾಗಿ ನದಿ ಪಾಲಾಗಿದೆ.

ಕೂಡಲೇ ಸಂತ್ರಸ್ತ ರೈತರಿಗೆ ಜಿಲ್ಲಾಧಿಕಾರಿ ಹಾಗೂ ಮಹಾನಗರ ಪಾಲಿಕೆ ಮತ್ತು ಜನಪ್ರತಿನಿಧಿಗಳು ಜತೆಯಾಗಿ ಪರಿಹಾರ ನೀಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ದರು.

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...