Wednesday, April 10, 2024

ಬ್ರಹ್ಮಕಲಶ ಪ್ರಯುಕ್ತ ಶ್ರಮಿಕ ಸಮಾವೇಶ, ಮಹಿಳಾ ಸಮಾವೇಶ ಮತ್ತು ಸ್ವಯಂಸೇವಕರ-ಸಂಘಸಂಸ್ಥೆಗಳ ಸಮಾವೇಶ

ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶ ಮತ್ತು ವರ್ಷಾವಧಿ ಉತ್ಸವ ಫೆಬ್ರವರಿ 15ರಿಂದ ಫೆಬ್ರವರಿ 24ರ ವರೆಗೆ ಅದ್ದೂರಿಯಾಗಿ ನಡೆಯಲಿದ್ದು, ಬ್ರಹ್ಮಕಲಶ ಪೂರ್ವಭಾವಿ ಕಾರ್ಯಕ್ರಮಗಳ ಅವಲೋಕನ ಸಭೆ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವಿವಿಧ ಸಮಾವೇಶಗಳ ಆಯೋಜನೆ ಬಗ್ಗೆ ಬ್ರಹ್ಮಕಲಶೋತ್ಸವ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿ ಮಾಹಿತಿ ನೀಡಿದೆ.

ಇತ್ತೀಚೆಗೆ ದೇವಂದಬೆಟ್ಟು ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಸಮಿತಿ ಸಭೆಯಲ್ಲಿ ಈ ಬಗ್ಗೆ ವಿವರಗಳನ್ನು ನೀಡಲಾಯಿತು.
ನವೆಂಬರ್ 21, 2021 ಭಾನುವಾರ ಬೆಳಿಗ್ಗೆ 8 ಗಂಟೆಗೆ ವಿವಿಧ ಜೀರ್ಣೋದ್ಧಾರ ಕಾರ್ಯಗಳಿಗೆ ಗುದ್ದಲಿಪೂಜೆ. ಆ ಬಳಿಕ ಜೀರ್ಣೋದ್ಧಾರ ಕಾರ್ಯದಲ್ಲಿ ಭಾಗವಹಿಸಲಿರುವ ಕರಸೇವಕರು, ಕಾರ್ಮಿಕರಿಗಾಗಿ ಶ್ರಮಿಕ ಸಮಾವೇಶ ನಡೆಯಲಿದೆ.
ಡಿಸೆಂಬರ್ 12, 2021 ಭಾನುವಾರ ಬೆಳಿಗ್ಗೆ 10 ಗಂಟೆಗೆ ದೇವಸ್ಥಾನದ ವಠಾರದಲ್ಲಿ ಮಹಿಳೆಯರಿಗಾಗಿ ಮಾತೃ ಸಮಾವೇಶ. ಮಧ್ಯಾಹ್ನ ಭೋಜನದ ವ್ಯವಸ್ಥೆ ಇರುತ್ತದೆ. ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸುವಲ್ಲಿ ಮಹಿಳೆಯರ ಪಾತ್ರ ಮತ್ತು ವಿವಿಧ ಬಗೆಯ ಮಾರ್ಗದರ್ಶನವನ್ನು ನೀಡಲಾಗುವುದು.
ಡಿಸೆಂಬರ್ 30ರಿಂದ ಫೆಬ್ರವರಿ 15ರ ವರೆಗೆ 48 ದಿನಗಳ ಕಾಲ 48 ವಿವಿಧ ಭಜನಾ ತಂಡಗಳಿಂದ ಪ್ರತಿ ದಿನ ಸಂಜೆ 6ರಿಂದ 8ರ ವರೆಗೆ ಸಂಧ್ಯಾ ಭಜನಾ ಸಂಕೀರ್ತನೆ. ಸೇವೆಯಲ್ಲಿ ಭಾಗವಹಿಸಲು ಇಚ್ಛಿಸುವ ಭಜನಾ ತಂಡಗಳಿಗೆ ನೋಂದಾವಣೆಗೆ ಅವಕಾಶ ಕಲ್ಪಿಸಲಾಗುವುದು.
ಜನವರಿ 23, 2022 ಭಾನುವಾರ ಸ್ವಯಂಸೇವಕರು ಮತ್ತು ಸಂಘಸಂಸ್ಥೆಗಳ ಸಮಾವೇಶ ನಡೆಯಲಿದೆ.
ದೇವಸ್ಥಾನದಲ್ಲಿ ಗೋಶಾಲೆಯನ್ನು ನಿರ್ಮಿಸಿ ದೇವಸ್ಥಾನದ ವತಿಯಿಂದಲೇ ನಿರ್ವಹಿಸುವ ಕೆಲಸ ಮಾಡಲಾಗುವುದು.
ಬ್ರಹ್ಮಕಲಶೋತ್ಸವ ಪ್ರಯುಕ್ತ ಫೆಬ್ರವರಿ 15ಕ್ಕೆ ಮಧ್ಯಾಹ್ನ 2 ಗಂಟೆಗೆ ಬಿ.ಸಿ.ರೋಡಿನಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ದೇವಂದಬೆಟ್ಟುವಿಗೆ ಆಗಮಿಸಲಿದೆ ಎಂದು ಸಮಿತಿ ತಿಳಿಸಿದೆ.

ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಉಪಾಧ್ಯಾಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಮುಂಡಾಜೆ, ಅಧ್ಯಕ್ಷ ಸದಾನಂದ ಶೆಟ್ಟಿ ರಂಗೋಲಿ, ಸಂಚಾಲಕ ತೇವು ತಾರನಾಥ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ಗಣೇಶ್ ಸುವರ್ಣ ತುಂಬೆ, ಕೋಶಾಧಿಕಾರಿ ಕವಿರಾಜ್ ಚಂದ್ರಿಗೆ, ಪ್ರಮುಖರಾದ ಜ್ಯೋತೀಂದ್ರ ಶೆಟ್ಟಿ ಮುಂಡಾಜೆ, ಭುವನೇಶ್ ಪಚ್ಚಿನಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಾಮೋದರ ನೆತ್ತರಕೆರೆ, ಸತೀಶ್ ಶೆಟ್ಟಿ ಮೊಡಂಕಾಪು, ಪುರುಷೋತ್ತಮ ಕೊಟ್ಟಾರಿ ಮಾಡಂಗೆ, ಅಮಿತಾ ವಿಶ್ವನಾಥ್ ದಾಸರಕೋಡಿ, ಉಮಾ ಲಿಂಗಪ್ಪ ಕುಲಾಲ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...